Monday, July 22, 2024
spot_img
More

    Latest Posts

    ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯವಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

    ಬೆಂಗಳೂರು, ಜೂ. 08: ನಕಲಿ ವೈದ್ಯಕೀಯ ವೃತ್ತಿಯನ್ನು ಬೇರುಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆಯು ಆದೇಶವನ್ನು ಹೊರಡಿಸಿದ್ದು ಇದರನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್’ಗಳು ತಮ್ಮ ಕೆಪಿಎಂಇ ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯವಾಗಿದೆ ಎಂದು ಆರೋಗು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

    ಬಣ್ಣ ಸಂಹಿತೆ ಕಡ್ಡಾಯ; ತಪ್ಪಿದರ ಕಾನೂನು ಕ್ರಮ : ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು. ಖಾಸಗಿ ವೈದ್ಯಕೀಯ ಆಸ್ಪತ್ರೆಗಳು ಈ ನಿಯಮಗಳನ್ನು ಅನುಸರಿಸುವಲ್ಲಿ ವಿಫಲವಾದಲ್ಲಿ ಕೆಪಿಎಂಇ ತಿದ್ದುಪಡಿ ಕಾಯಿದೆ 2017 ರ ಸೆಕ್ಷನ್ 19(5) ರ ಅನ್ವಯ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

    ನಕಲಿ ಮತ್ತು ಅರ್ಹತೆ ಹೊಂದಿಲ್ಲದ ವೈದ್ಯರು ಸಮಾಜಕ್ಕೆ ಕಂಟಕರಾಗಿದ್ದು ರೋಗಿಗಳ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ನಮ್ಮ ಸರ್ಕಾರವು ರೋಗಿಗಳ ಸುರಕ್ಷತೆಗೆ ಮತ್ತು ಉತ್ತಮ ಆರೋಗ್ಯ ಸೇವೆ ಒದಗಿಸಲು ಬದ್ಧವಾಗಿದೆ. ಇನ್ನು ಹೆಚ್ಚಿನ ವಿವರಗಳಿಗಾಗಿ ದಯವಿಟ್ಟು ಸುತ್ತೋಲೆಯನ್ನು ಪರಾಮರ್ಶಿಸಿ ಎಂದು ಪೋಸ್ಟ್ ಮಾಡಿದ್ದಾರೆ

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss