Saturday, October 5, 2024
spot_img
More

    Latest Posts

    ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಫೋಟೊ-ವಿಡಿಯೋ ಚಿತ್ರೀಕರಣ ನಿಷೇಧ

    ಬೆಂಗಳೂರು: ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಅಪ್ಪಿತಪ್ಪಿಯೂ ವಿಡಿಯೋ ಚಿತ್ರೀಕರಣ ಇಲ್ಲವೇ ಫೋಟೋ ತೆಗೆಯುವಂತಿಲ್ಲ. ಶುಕ್ರವಾರ ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅೀನ ಕಾರ್ಯದರ್ಶಿ ಕೆ.ವೆಂಕಟೇಶಪ್ಪ ಅವರು ಸುತ್ತೋಲೆ ಹೊರಡಿಸಿದ್ದು, ಸರ್ಕಾರದ ವ್ಯಾಪ್ತಿಗೆ ಒಳಪಡುವ ಕಚೇರಿ ಸಮಯದಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ ತೆಗೆಯುವುದು ಇಲ್ಲವೆ ವಿಡಿಯೋ ಚಿತ್ರೀಕರಣ ಮಾಡದಂತೆ ನಿಷೇಧಿಸಿ ಅಧಿಸೂಚನೆ ಹೊರಡಿಸಿದ್ದಾರೆ.

    ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಕೆಲಸದ ನಿಮಿತ್ತ ಬಂದಾಗ ಫೋಟೋ ತೆಗೆಯುವುದು ಇಲ್ಲವೇ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಾರೆ. ಕೆಲವು ಸಂದರ್ಭಗಳಲ್ಲಿ ಇದು ರುಪಯೋಗವಾಗಿರುವುದರಿಂದ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

    ಸಾರ್ವಜನಿಕರ ನೆಪದಲ್ಲಿ ಬರುವ ಖಾಸಗಿ ವ್ಯಕ್ತಿಗಳು ಯಾರೊಬ್ಬರ ಅನುಮತಿ ಪಡೆಯದೇ ಈ ರೀತಿ ವಿಡಿಯೋ ಚಿತ್ರೀಕರಣ ಮಾಡಿಕೊಂಡು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಮಹಿಳಾ ನೌಕರರಿಗೆ ಇದರಿಂದ ಸಮಸ್ಯೆ ಉಂಟಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

    ನೌಕರರಿಗೆ ಉಂಟಾಗುತ್ತಿದ್ದ ತೊಂದರೆಯನ್ನು ಗಮನದಲ್ಲಿಟ್ಟುಕೊಂಡು ಇನ್ನು ಮುಂದೆ ಅನುಮತಿ ಪಡೆಯದೆ ಸರ್ಕಾರಿ ಕಚೇರಿಗಳಲ್ಲಿ ವಿಡಿಯೋ ಚಿತ್ರೀಕರಣ ಹಾಗೂ ಫೋಟೊ ತೆಗೆಯುವುದಕ್ಕೆ ನಿರ್ಬಂಧ ಹಾಕಲಾಗಿದೆ. ನೌಕರರು ಕೂಡ ಈ ಬಗ್ಗೆ ಸಾಕಷ್ಟು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಎಲ್ಲದರ ಬಗ್ಗೆ ಚರ್ಚಿಸಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss