ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ 139ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಅಕ್ಷಯ ಟವರ್ ಎರಡನೇ ಮಹಡಿ ಉಡುಪಿ ಸಿಟಿ ಬಸ್ ಸ್ಟ್ಯಾಂಡ್ ಸಮೀಪ ಕಾಫಿಯಾ ಹೋಟೆಲ್ ಹತ್ತಿರ ಜುಮ್ಮ ಮಸೀದಿ ಎದುರುಗಡೆ ಯಲ್ಲಿರುವ ತುಳುನಾಡ ರಕ್ಷಣಾ ವೇದಿಕೆ ಕಚೇರಿಯಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ಕೃಷ್ಣಕುಮಾರ್ ರವರ ಅಧ್ಯಕ್ಷತೆಯಲ್ಲಿ ಇಂದು ರವಿವಾರ ದಿನಾಂಕ 14-04-2024 ಸಂಜೆ 3 ಗಂಟೆಗೆ ನಡೆಯಿತು.
ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ರವರು ಸಂವಿಧಾನ ಶಿಲ್ಪಿ ಡಾ.ಬಿ. ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇವತ್ತಿನ ದಿನ ತುಳುನಾಡಿಗೆ ಬಹಳ ಪ್ರಾಮುಖ್ಯ ದಿನವಾಗಿದೆ ಒಂದು ರೀತಿಯಲ್ಲಿ ಸಂವಿಧಾನ ಶಿಲ್ಪಿಯ ಜನ್ಮದಿನಾಚರಣೆ ಅದೇ ರೀತಿ ಇನ್ನೊಂದು ತುಳುನಾಡಿಗೆ ಬಿಸ್ಲು ಪರ್ಬದ ಸಂಭ್ರಮ ಸಂಭ್ರಮ, ಸಭೆಯ ಅಧ್ಯಕ್ಷತೆ ವಹಿಸಿದೆ ಮಾತನಾಡಿದ ಕೃಷ್ಣಕುಮಾರ್ ರವರು ಆಚರಣೆ ಬಗ್ಗೆ ವಿವರಿಸಿದರು. ಜಿಲ್ಲಾ ವೀಕ್ಷಕರಾದ ಫ್ರಾಂಕಿ ಡಿಸೋಜರವರು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಗುಣಗಾನ ಮಾಡಿದರು. ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷರಾದ ಜಯ ಪೂಜಾರಿರವರು ಸಂವಿಧಾನವು ಕಾರ್ಮಿಕರಿಗೆ ನೀಡಿರುವಂತಹ ರಕ್ಷಣೆ ಮತ್ತು ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು, ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರ ,ಮಹಿಳಾ ಕೋಶಾಧಿಕಾರಿ ಸುನಂದ ಕೋಟ್ಯಾನ್, ಮಂಗಳೂರು ನಗರ ಜೊತೆ ಕಾರ್ಯದರ್ಶಿ ರೋಷನ್ ಡಿಸೋಜ, ಉಡುಪಿ ಜಿಲ್ಲಾ ಕಾರ್ಯಕಾರಿ ಸದಸ್ಯರಾದ ಪ್ರೀತಂ ಡಿಸೋಜಾ ಮತ್ತು ಸಂಗೀತ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು