ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದಂತಹ ವಿಧಾನ ಪರಿಷತ್ ಉಪಚುನಾವಣೆಯ ಫಲಿತಾಂಶಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು 1600 ಮತಗಳ ಭಾರೀ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.
ಬೆಳಗ್ಗೆ 8 ಗಂಟೆಯಿಂದಲೇ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಆರಂಭಗೊಂಡಿತ್ತು. ಬಿಜೆಪಿ- 3654, ಕಾಂಗ್ರೆಸ್- 1957 ಮತ್ತು ಎಸ್‌ಡಿಪಿಐ-195 ಮತಗಳನ್ನು ಪಡೆಯುವುದರೊಂದಿಗೆ ಮತ ಎಣಿಕೆ ಮುಕ್ತಾಯಗೊಂಡಿದೆ.
ಈ ವೇಳೆ ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು