ತಿರುವನಂತಪುರ: ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಬಸ್‌ಗೆ ಹಿಂಬದಿಯಿಂದ ಬಂದ ಬಸ್ ಢಿಕ್ಕಿ ಹೊಡೆದ ಪರಿಣಾಮ ಐವರು ವಿದ್ಯಾರ್ಥಿಗಳು ಸೇರಿ ಒಟ್ಟು 9ಮಂದಿ ಮೃತಪಟ್ಟಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ವಡಕ್ಕಾಂಚೇರಿಯಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ 11.30ರ ಸುಮಾರಿಗೆ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ಸೊಂದು ಕಾರೊಂದನ್ನು ಹಿಂದಿಕ್ಕುವ ಭರದಲ್ಲಿ ಸರ್ಕಾರಿ ಬಸ್‌ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಬಸ್‌ನಲ್ಲಿ 42 ವಿದ್ಯಾರ್ಥಿಗಳು ಮತ್ತು 5 ಶಿಕ್ಷಕರು ಪ್ರವಾಸಕ್ಕೆ ಹೊರಟಿದ್ದರು ಎನ್ನಲಾಗಿದೆ.
