ಖಾಸಗಿ ಆಸ್ಪತ್ರೆಯೊಂದರ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿದ ಆರೋಪ ಕೇಳಿಬಂದಿದೆ. ಬೆಂಗಳೂರಿನ ಆನೇಕಲ್ ಪಟ್ಟಣದ ಈ ಘಟನೆ ನಡೆದಿದೆ. ಕವಿತಾ(24) ಮೃತ ದುರ್ದೈವಿ. ಇನ್ನು ಆಸ್ಪತ್ರೆ ವಿರುದ್ಧ ಮೃತ ಬಾಣಂತಿ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಣಂತಿಗೆ ಇದೇ ತಿಂಗಳು 13ನೇ ತಾರೀಕು ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೆರಿಗೆಗಾಗಿ ಅಮ್ಮ ಆಸ್ಪತ್ರೆಗೆ ದಾಖಲು ಮಾಡಿಲಾಗಿತ್ತು. 14ನೇ ತಾರೀಕಿನಂದು ಆಪರೇಷನ್ ಮೂಲಕ ವೈದ್ಯರು ಹೆರಿಗೆ ಮಾಡಿಸಿದ್ದರು.
ಇನ್ನು ಹೆರಿಗೆ ಆದ ಬಳಿಕ ತಾಯಿ ತೀವ್ರ ರಕ್ತಸ್ರಾವದಿಂದ ಬಳಲಿದ್ದಾರೆ. ಈ ಹಿನ್ನಲೆ ಪರಿಸ್ಥಿತಿ ಹದಗೆಡುತ್ತಿದ್ದಂತೆ ನಾರಾಯಣ ಹೆಲ್ತ್ ಸಿಟಿಗೆ ಶಿಫ್ಟ್ ಮಾಡಲಾಗಿದೆ. ಆದ್ರೆ, ನಾರಾಯಣ ಹೆಲ್ತ್ ಸಿಟಿಯಲ್ಲಿ ಬಾಣಂತಿ ಕೊನೆಯುಸಿರೆಳೆದಿದ್ದಾರೆ. ವೈದ್ಯರ ನಿರ್ಲಕ್ಷ್ಯ ಆರೋಪದ ಮೇಲೆ ಇದೀಗ ಆನೇಕಲ್ ಪೊಲೀಸ್ ಠಾಣೆಯಲ್ಲಿ ಮೃತ ಕವಿತಾ ಅಣ್ಣ ಮಧುಸೂದನ್ ದೂರು ದಾಖಲು ಮಾಡಿದ್ದಾರೆ. ಕೂಡಲೇ ಅಮ್ಮ ಆಸ್ಪತ್ರೆ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ
©2021 Tulunada Surya | Developed by CuriousLabs