Sunday, September 8, 2024
spot_img
More

    Latest Posts

    *ಗುರುಪುರ ಕೈಕಂಬ ಪ್ಲೈ ಒವರ್ ಸೇತುವೆ ನಿರ್ಮಿಸಲು:  ಎಸ್‌ಡಿಪಿಐ ಆಗ್ರಹ

    🔹 ಕೈಕಂಬ ಪೇಟೆ ಉಳಿವಿಗಾಗಿ ಪಕ್ಷಾತೀತವಾಗಿ ಹೊರಾಡೋಣ: ಅನ್ವರ್ ಸಾದಾತ್

    ಮಂಗಳೂರು-ಸೋಲಾಪುರ ರಾಷ್ಟ್ರೀಯ ಹೆದ್ದಾರಿ 169 ರ ಬಿಕರ್ನಕಟ್ಟೆ-ಸಾಣೂರು ವರೆಗೆ ಚತುಷ್ಪಥ ಕಾಮಗಾರಿಯು ಗುರುಪುರ ಕೈಕಂಬ ಜಂಕ್ಷನ್ ನಲ್ಲಿ ಅವೈಜ್ಞಾನಿಕ ರೀತಿಯಲ್ಲಿ ನಡೆಯುತ್ತಿದ್ದು ಹಲವಾರು ಸಮಸ್ಯೆಗಳಿಗೆ ಕಾರಣವಾಗುವ ಅಂಡರ್ ಪಾಸ್ ಮಾದರಿಯಾ ಕಾಮಗಾರಿಯನ್ನು ಸ್ಥಗಿತಗೊಳಿಸಿ ಚತುಷ್ಪಥ ಫ್ಲೈ ಓವರ್ ನಿರ್ಮಿಸಲು ಆಗ್ರಹಿಸಿ ಹಕ್ಕೊತ್ತಾಯ ಸಭೆ ಗುರುಪುರ ಕೈಕಂಬ ಜಂಕ್ಷನ್ ನಲ್ಲಿ ನಡೆಯಿತು

    ಹಕ್ಕೊತ್ತಾಯ ಸಭೆಯನ್ನು ಉದ್ದೇಶಿಸಿ SDPI ದ.ಕ.ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು ಮಾತನಾಡಿದರು ಗುರುಪುರ ಗ್ರಾಮ ಪಂಚಾಯತ್ ಸದಸ್ಯ ಎ.ಕೆ.ರಿಯಾಝ್ ಅಧ್ಯಕ್ಷತೆ ವಹಿಸಿದ್ದರು

    ಪ್ರತಿಭಟನಾ ಸಭೆಯಲ್ಲಿ ಗುರುಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಫಾರ ನಾಸೀರ್ SDPI ಗುರುಪುರ ಕೈಕಂಬ ಬ್ಲಾಕ್ ಸಮಿತಿಯ ಅಧ್ಯಕ್ಷ ಅಶ್ರಫ್ ಕೈಕಂಬ, SDPI ಗುರುಪುರ ಗ್ರಾಮ ಸಮಿತಿಯ ಅಧ್ಯಕ್ಷ ಎ.ಕೆ.ಮುಸ್ತಾಪ ಅಡ್ಡೂರು ಗ್ರಾಮ ಪಂಚಾಯತ್ ಸದಸ್ಯರಾದ ಮಹಮ್ಮದ್ ಅಶ್ರಫ್ ಅಡ್ಡೂರು, ಝಕರಿಯಾ ಶಾಹೀಕ್, ಮನ್ಸೂರ್ ಟಿಬೆಟ್,ದಿಲ್ಶಾದ್, ಬುಶ್ರಾ, ಮರಿಯಮ್ಮ,ಅಝ್ಮೀನಾ,ರೆಹನಾ ಉಪಸ್ಥಿತರಿದ್ದರು

    ಮಂಗಳೂರು ತಾಲೂಕು ಉಪಾ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದರು

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss