Monday, October 7, 2024
spot_img
More

    Latest Posts

    ತುಳುನಾಡ ರಕ್ಷಣಾ ವೇದಿಕೆ ಕಾರ್ಮಿಕ ಘಟಕದ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಜಯಣ್ಣ ಆಯ್ಕೆ

    ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಅಧ್ಯಕ್ಷರಾದ ಕೃಷ್ಣಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಜಯರಾಮ್ ಪೂಜಾರಿ ರವರ ಸೂಚನೆ ಮತ್ತು ಉಡುಪಿ ಜಿಲ್ಲಾ ವೀಕ್ಷಕರಾದ ಫ್ರಾಂಕಿ ಡಿಸೋಜಾ ಕೊಳಲಗಿರಿಯವರ ಶಿಫಾರಸಿನ ಮೇರೆಗೆ ಈ ಕೂಡಲೇ ಜಾರಿಗೆ ಬರುವಂತೆ ಉಡುಪಿ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರನ್ನಾಗಿ ಜಯಣ್ಣರನ್ನು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಹಾಗೂ ಕೇಂದ್ರಿಯ ಮಂಡಳಿ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪು ರವರು ನೇಮಕ ಮಾಡಿರುತ್ತಾರೆ. ಕಾರ್ಮಿಕ ಘಟಕ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಜಯಣ್ಣ ರವರು ಮುಂದಿನ ದಿನಗಳಲ್ಲಿ ಶ್ರೀ ಯೋಗಿಶ್ ಶೆಟ್ಟಿ ಜಪ್ಪುರವರ ಮಾರ್ಗದರ್ಶನದೊಂದಿಗೆ ಕಾರ್ಮಿಕರ ಸಮಸ್ಯೆ ಮತ್ತು ನೊಂದವರ ಏಳಿಗೆಗಾಗಿ ದುಡಿಯುವ ಮೂಲಕ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಾರ್ಮಿಕ ಘಟಕವನ್ನು ಬಲಪಡಿಸುವುದಾಗಿ ಭರವಸೆ ನೀಡಿದರು. ವೇದಿಕೆಯಲ್ಲಿ ಮಹಿಳಾ ಘಟಕ ಅಧ್ಯಕ್ಷರಾದ ಶೋಭಾ ಪಂಗಳಾ, ಜಿಲ್ಲಾ ಉಪಾಧ್ಯಕ್ಷರಾದ ಜಯರಾಮ್ ಪೂಜಾರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜರುದ್ದೀನ್ ಸುಬ್ರಮಣ್ಯ ನಗರ ಸೇರಿದಂತೆ ಜಿಲ್ಲಾ ಘಟಕದ ಪದಾಧಿಕಾರಿಗಳು ಮತ್ತು ವಿವಿಧ ತಾಲೂಕು ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ಮಹಿಳಾ ಕೋಶಾಧಿಕಾರಿ ಸುನಂದ ಕೋಟ್ಯಾನ್ ಧನ್ಯವಾದ ಅರ್ಪಿಸಿದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss