ದಿನಾಂಕ 8-04-2024 ರಂದು ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಮಂಡಳಿ ಅದ್ಯಕ್ಷರಾದ ಯೋಗಿಶ್ ಶೆಟ್ಟಿ ಜಪ್ಪು ರವರು ನೂತನ ಉಡುಪಿ ಜಿಲ್ಲಾ ಸರ್ಜನ್ ಡಾ. ಅಶೋಕ್ ಭೇಟಿಯಾಗಿ ಉಡುಪಿ ಜಿಲ್ಲಾ ಆಸ್ಪತ್ರೆಯ ಕಿಡ್ನಿ ದಯಾಲಿಸಸ್ ರೋಗಿಗಳ ಸಮಸ್ಯೆ ಸೇರಿದಂತೆ ವಿವಿಧ ಚಿಕಿತ್ಸೆಗಳ ಬಗ್ಗೆ ಸಮಸ್ಯೆ ಮತ್ತು ಪರಿಹಾರಗಳ ಕುರಿತು ಸಮಾಲೋಚನೆ ನಡೆಸಿದರು. ಜಿಲ್ಲಾ ಶಸ್ತ್ರಚಿಕಿತ್ಸಕ ಅಶೋಕ್ ರವರು ಉತ್ತಮ ರೀತಿಯಲ್ಲಿ ಸ್ಪಂದಿಸಿ ಜಿಲ್ಲಾ ಆಸ್ಪತ್ರೆಯ ಅತ್ಯಾಧುನಿಕ ಚಿಕಿತ್ಸೆ ಗಳ ಸೇವೆ ಬಗ್ಗೆ ವಿವರಿಸಿದರು. ಉಡುಪಿ ಜಿಲ್ಲಾ ವೀಕ್ಷಕರಾದ ಫ್ರಾಂಕಿ ಡಿಸೋಜಾ ಕೊಳಲಗಿರಿ ಉಪಸ್ಥಿತರಿದ್ದರು
©2021 Tulunada Surya | Developed by CuriousLabs