ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಸೋಲಿನ ರುಚಿ ಕಂಡಿದ್ದಾರೆ. ಸುಮಾರು 97,000 ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆದ್ದಿದ್ದಾರೆ.
ಬ್ರಿಜೇಶ್ ಚೌಟ ಈಗಿನ ಲೆಕ್ಕಾಚಾರದ ಪ್ರಕಾರ 4 ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ 3 ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ.
ಈ ಬಾರಿ ಕಾಂಗ್ರೆಸ್ಸಿನ ಪದ್ಮರಾಜ್ ಗೆಲ್ಲುತ್ತಾರೆ ಎಂಬ ಲೆಕ್ಕಾಚಾರಗಳಿತ್ತಾದರೂ ಈಗ ಫಲಿತಾಂಶ ಬಹುತೇಕ ಉಲ್ಟಾ ಆಗಿದೆ. ಕ್ಯಾ. ಬ್ರಿಜೇಶ್ ಚೌಟ ಗೆದ್ದಿದ್ದಾರೆ.