ಲಕ್ನೋ:34 ವರ್ಷದ ಮೂರು ಮಕ್ಕಳ ತಾಯಿಯೊಬ್ಬಳು ತನ್ನ ವಿವಾಹೇತರ ಸಂಬಂಧ ಇಟ್ಟುಕೊಂಡು ಪತಿ ಹಾಗೂ ಪ್ರಿಯತಮ ಇಬ್ಬರೂ ನನಗೆ ಬೇಕು ಎಂದು ಹೇಳಿ ವಿದ್ಯುತ್ ಕಂಬವೇರಿ ಮಹಿಳೆ ಪ್ರತಿಭಟನೆ ನಡೆಸಿದ ಘಟನೆ ಉತ್ತರ ಪ್ರದೇಶದ ಪಟ್ಟಣವೊಂದರಲ್ಲಿ ನಡೆದಿದೆ
ಮಹಿಳೆ ತನ್ನ ಪತಿ ಹಾಗೂ ಮೂವರು ಮಕ್ಕಳೊಂದಿಗೆ ವಾಸವಾಗಿದ್ದಳು. ಆಕೆ ಪಕ್ಕದ ಗ್ರಾಮದ ವ್ಯಕ್ತಿಯೊಬ್ಬನನ್ನು ಪ್ರೀತಿಸುತ್ತಿದ್ದಳು. ಕಳೆದ 7 ವರ್ಷಗಳಿಂದ ಪತಿಗೆ ತಿಳಿಯದಂತೆ ಇವರಿಬ್ಬರ ಪ್ರೇಮ ಪುರಾಣ ನಡೆಯುತ್ತಿತ್ತು
ಮಹಿಳೆಯ ಪತಿ ರಾಮ್ ಗೋವಿಂದ್ ಕೂಲಿ ಕೆಲಸ ಮಾಡುತ್ತಿದ್ದನು. ಇತ್ತೀಚೆಗೆ ಇವರಿಬ್ಬರ ಪ್ರೀತಿ ವಿಚಾರ ಪತಿಯ ಗಮನಕ್ಕೆ ಬಂದಿದ್ದು, ದಂಪತಿ ನಡುವೆ ವಾಗ್ವಾದ ನಡೆಯಿತು. ಅಲ್ಲದೇ ಪ್ರಿಯತಮನಿಗೂ ಮನೆಯಲ್ಲಿ ಇರಲು ಅವಕಾಶ ಕಲ್ಪಿಸಬೇಕು ಮತ್ತು ಮನೆಯ ಆರ್ಥಿಕತೆಗೆ ಸಹಾಯ ಮಾಡಬೇಕೆಂದು ಒತ್ತಾಯಿಸಿದಳು. ಪತ್ನಿಯ ಮಾತಿನಿಂದ ರಾಮ್ ಗೋವಿಂದ್ ಕೋಪಗೊಂಡು ಮನೆಯಿಂದಲೇ ಹೊರ ನಡೆದಿದ್ದಾನೆ. ಪತಿ ಮನೆಯಿಂದ ಹೊರ ನಡೆಯುತ್ತಿದ್ದಂತೆಯೇ ಪತಿ ಹಾಗೂ ಪ್ರಿಯತಮ ಇಬ್ಬರೂ ನನಗೆ ಬೇಕು ಎಂದು ಹೇಳಿ ಮನೆಯ ಪಕ್ಕದಲ್ಲೇ ಇರುವ ವಿದ್ಯುತ್ ಕಂಬವೇರಿ ಮಹಿಳೆ ಪ್ರತಿಭಟನೆ ನಡೆಸಿದ್ದಾಳೆ.
ಕೂಡಲೇ ಸ್ಥಳೀಯರು ಆಕೆಯನ್ನು ಕೆಳಗೆ ಇಳಿಯುವಂತೆ ಕೇಳಿಕೊಂಡಿದ್ದಾರೆ. ಎಷ್ಟು ಮನವಿ ಮಾಡಿಕೊಂಡರೂ ಮಹಿಳೆ ಕಂಬದಿಂದ ಕೆಳಗೆ ಇಳಿಯದಿದ್ದರಿಂದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸ್ ಮತ್ತು ವಿದ್ಯುತ್ ಇಲಾಖೆಗಳ ತಂಡವು ಮುಂಜಾಗ್ರತಾ ಕ್ರಮವಾಗಿ ವಿದ್ಯುಚ್ಛಕ್ತಿ ಸರಬರಾಜನ್ನು ಸ್ಥಗಿತಗೊಳಿಸಿ. ಬಳಿಕ ಕಂಬದಿಂದ ಮಹಿಳೆಯನ್ನು ಕೆಳಗಿಳಿಸಿದ್ದಾರೆ