Monday, July 22, 2024
spot_img
More

  Latest Posts

  ಪೂಜಾರಿ ಹಾದಿಯಲ್ಲಿ ಸಾಗುವೆ; ಅಭಿವೃದ್ಧಿ ಪರ, ಸೌಹಾರ್ದ ದಕ್ಷಿಣ ಕನ್ನಡ ನನ್ನ ಕನಸು: ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

  ಮಂಗಳೂರು :(Tulunada surya) ನನ್ನ ರಾಜಕೀಯ ಗುರುಗಳಾದ ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಹಾದಿಯಲ್ಲಿ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ರಾಜಕಾರಣ ಮಾಡುವುದಾಗಿ ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು.

  ತುಳುನಾಡಿನ ಸಮಗ್ರ ಅಭಿವೃದ್ಧಿ ಜತೆಗೆ ಸೌಹಾರ್ದ ಪರಂಪರೆಯನ್ನು ಮರಳಿ ಕಟ್ಟುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಗತವೈಭವ ಮರುಕಳಿಸುವಂತೆ ಮಾಡುವುದು ನನ್ನ ಉದ್ದೇಶ ಎಂದು ಒಂದು ರೀತಿಯಲ್ಲಿ ಪ್ರತಿಜ್ಞೆ ಮಾದರಿಯಲ್ಲಿ ಅವರು ನುಡಿದರು.
  ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಧಿಕೃತ ಘೋಷಣೆಯಾದ ಬಳಿಕ ಬೆಂಗಳೂರಿನಿಂದ ಶುಕ್ರವಾರ
  ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪದ್ಮರಾಜ್
  ಅವರನ್ನು ಕಾಂಗ್ರೆಸ್ ನಾಯಕರು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಅದ್ದೂರಿಯಾಗಿ ಸ್ವಾಗತಿಸಿದರು. ಹಾರ ಹಾಕಿ ಸಂಭ್ರಮಿಸಿದರು. ಚೆಂಡೆ ವಾದ್ಯಗಳ ಜೊತೆ ಭರ್ಜರಿಯಾಗಿ ಬರಮಾಡಿಕೊಂಡರು.
  ಬಳಿಕ ಅವರು ಆಧುನಿಕ ಮಂಗಳೂರು ಶಿಲ್ಪಿ ಉಳ್ಳಾಲ ಶ್ರೀನಿವಾಸ್ ಮಲ್ಯರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಮನ ಸಲ್ಲಿಸಿದರು. ಕದ್ರಿಯ ವೀರ ಯೋಧರ ಸ್ಮಾರಕ್ಕೆ ತೆರಳಿ ದೇಶಕ್ಕಾಗಿ ಮಡಿದ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ಬಳಿಕ ಎಂ.ಜಿ. ರಸ್ತೆಯಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರಾಷ್ಟ್ರಪಿತಗೆ ಗೌರವ ಸಲ್ಲಿಸಿದರು. ಮಂಗಳೂರು ಪುರಭವನದ ಎದುರಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಗೌರವ, ಬಾವುಡಗುಡ್ಡೆಯಲ್ಲಿ ಹಿರಿಯ ಸ್ವಾತಂತ್ರೃ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಗೌರವ ಸಲ್ಲಿಸಿ, ಟಾಗೋರ್ ಪಾರ್ಕ್‌ನಲ್ಲಿ ರವೀಂದ್ರನಾಥ ಟಾಗೋರ್ ಪ್ರತಿಮೆಗೆ ನಮನ ಸಲ್ಲಿಸಿದರು.

  ಈ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತನ್ನನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ ಹೈಕಮಾಂಡ್ ನಾಯಕರಿಗೆ ಮತ್ತು ತನ್ನನ್ನು ಬೆಂಬಲಿಸಿದ ರಾಜ್ಯ ನಾಯಕರು ಮತ್ತು ಜಿಲ್ಲಾ ನಾಯಕರಿಗೆ ಧನ್ಯವಾದ ಸಲ್ಲಿಸಿದರು.
  ಮಾಜಿ ಸಚಿವ ಅಭಯಚಂದ್ರ ಜೈನ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ,
  ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಪೀತಾಂಬರ ಹೆರಾಜೆ, ಉಪಾಧ್ಯಕ್ಷ ರವಿಪೂಜಾರಿ ಚಿಲಿಂಬಿ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ, ಶ್ರೀ ನಾರಾಯಣ ಗುರು ಸಂಘ ಬೆಳ್ತಂಗಡಿ ಮಾಜಿ ಅಧ್ಯಕ್ಷ ಜಯರಾಮ ಬಂಗೇರ, ನಾರಾಯಣ ಮಚ್ಚಿನ, ದೀಪಕ್ ಪೆರ್ಮುದೆ, ಪದ್ಮನಾಭ ಅಮೀನ್, ಸಂತೋಷ್ ಶೆಟ್ಟಿ, ಪ್ರಕಾಶ್ ಸಾಲಿಯಾನ್ . ಹರೀಶ್ ಮೂಲ್ಕಿ, ಕಿರಣ್ ಬುಡ್ಲೆಗುತ್ತು, ಮೋಹನಾಂಗಯ್ಯ ಸ್ವಾಮಿ , ಸುಹನ್ ಆಳ್ವ , ವಿನೋದರ ಪೂಜಾರಿ ,ಸುನಿಲ್ ಬಜಿಲೆಕೇರಿ , ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕಾಪೋರೇಟರ್‌ಗಳು, ಮಾಜಿ ಕಾಪೋರೇಟರ್‌ಗಳು ಉಪಸ್ಥಿತರಿದ್ದರು.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss