ಬ್ರಹ್ಮಾವರ: ಮಹಿಳೆಗೆ ಚುಡಾಯಿಸಿದ ಆರೋಪದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತಂದಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ಇಂದು ಸೆಲ್ನ ಬಾತ್ ರೂಮಿನೊಳಗೆ ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಕೇರಳ ರಾಜ್ಯ ಕೊಲ್ಲಂ ಮೂಲದ ಬಿಜು ಮೋಹನ್ (42) ಎಂದು ಗುರುತಿಸಲಾಗಿದೆ. ಇವರು ಹಂಗಾರಕಟ್ಟೆ ಮೀನು ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಮೂರು ದಿನಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿಕೊಂಡಿದ್ದರು. ಸೂರಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಿಜು ಮೋಹನ್, ನವೆಂಬರ್ 9 ರಂದು ರಾತ್ರಿ ವೇಳೆ ಅಲ್ಲೇ ಸಮೀಪದ ಮನೆಯಲ್ಲಿ ವಾಸವಿದ್ದ ಮಹಿಳೆಯನ್ನು ಚುಡಾಯಿಸಿದ್ದರು ಎಂದು ಆರೋಪಿಸಲಾಗಿದೆ. ಆ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು, ಸ್ಥಳೀಯರು ಜಮಾಯಿಸಿ ಬಿಜು ಮೋಹನ್ನನ್ನು ಹಿಡಿದು ಮನೆಯೊಳಗೆ ಕೂಡಿ ಹಾಕಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದಿದ್ದರು ಎಂದು ತಿಳಿದುಬಂದಿದೆ. ಮದ್ಯ ಸೇವಿಸಿದ್ದರೆನ್ನಲಾದ ಬಿಜು ಮೋಹನ್ ರನ್ನು ಸೆಲ್ನಲ್ಲಿ ಇರಿಸಲಾಗಿದ್ದು, ಇಂದು ನಸುಕಿನ ವೇಳೆ 3:30ರ ಸುಮಾರಿಗೆ ಆತ ಸಮೀಪದ ಬಾತ್ ರೂಮಿನಲ್ಲಿ ಕುಸಿದುಬಿದ್ದಿರುವುದು ಕಂಡುಬಂದಿದೆ. ತಕ್ಷಣ ಆತನನ್ನು ಬ್ರಹ್ಮಾವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು, ಪರೀಕ್ಷಿಸಿದಾಗ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
Trending
- ಸಾಮಾಜಿಕ ಜಾಲತಾಣ ವಿಡಿಯೊ ವೈರಲ್ ವಿಡಿಯೋ ಪ್ರಕರಣ: ಇಬ್ಬರು ಬಂಧನ, 20-30 ಮಂದಿಗೆ ಕಾನೂನು ಕ್ರಮ
- ಸಹಕಾರ ಕ್ಷೇತ್ರದ ಭೀಷ್ಮ, ‘ಸಹಕಾರ ರತ್ನ’ ಎಂದು ಕೀರ್ತಿಸಲ್ಪಡುವ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಜನ್ಮದಿನದ ಅಂಗವಾಗಿ ಅಭಿವಂದನಾ ಸಮಾರಂಭ ಹಾಗೂ 77 ಮಂದಿ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮ
- ಮಹಾಕಾಳಿ ಪಡ್ಪು ಅಂಡರ್ ಪಾಸ್ ರಸ್ತೆಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ನೀರು ನಿಲ್ಲುವುದು, ಮೊಯ್ಲಿಕೆರೆಯ ನೀರು ಸಂಪೂರ್ಣ ಕಲುಷಿತಗೊಂಡಿರುವುದು – ಶಾಸಕ ವೇದವ್ಯಾಸ ಕಾಮತ್ ಅಧಿಕಾರಿಗಳೊಂದಿಗೆ ಸ್ಥಳ ವೀಕ್ಷಣೆ
- ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ಭೇಟಿ ನೀಡಿ ಕ.ರ.ವೇ ಅದ್ಯಕ್ಷ ಹನುಮಂತ ಬೋವಿಯವರ ಆರೋಗ್ಯ ವಿಚಾರಿಸಿದ ತುಳುನಾಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು
- Indian Red Cross Society – ದಕ್ಷಿಣ ಕನ್ನಡ ಜಿಲ್ಲಾ ಘಟಕ 2026–29ನೇ ಸಾಲಿನ ಆಡಳಿತ ಮಂಡಳಿ ಚುನಾವಣೆಯಲ್ಲಿ ಶಾಂತಾರಾಮ ಶೆಟ್ಟಿ ತಂಡದ ಭರ್ಜರಿ ಗೆಲುವು
- ಉಡುಪಿ ಜಿಲ್ಲೆ, ಕಾಪು ತಾಲೂಕು ಇನ್ನಂಜೆ ಸುತ್ತಮುತ್ತ ಚಿರತೆ ಹಾವಳಿ: ತಕ್ಷಣ ಕ್ರಮಕ್ಕೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಆಗ್ರಹ
- 📰 ಉಡುಪಿ ಸರ್ವಿಸ್ ಬಸ್ ನಿಲ್ದಾಣ ಅವ್ಯವಸ್ಥೆ “ಕೂಡಲೇ ಕ್ರಮ ಕೈಗೊಳ್ಳಿ” – ಕರವೇ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಆಗ್ರಹ
- ಕಾರ್ಕಳ: ಪಳ್ಳಿ ಗ್ರಾಮದಲ್ಲಿ ಫಿಶ್ ಮೀಲ್ ಘಟಕ ಸ್ಥಾಪನೆ ವಿರೋಧಿಸಿ ಫೆ.23ರಂದು ಬೃಹತ್ ಪ್ರತಿಭಟನೆ
