ಬ್ರಹ್ಮಾವರ: ಮಹಿಳೆಗೆ ಚುಡಾಯಿಸಿದ ಆರೋಪದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತಂದಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ಇಂದು ಸೆಲ್ನ ಬಾತ್ ರೂಮಿನೊಳಗೆ ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಕೇರಳ ರಾಜ್ಯ ಕೊಲ್ಲಂ ಮೂಲದ ಬಿಜು ಮೋಹನ್ (42) ಎಂದು ಗುರುತಿಸಲಾಗಿದೆ. ಇವರು ಹಂಗಾರಕಟ್ಟೆ ಮೀನು ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಮೂರು ದಿನಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿಕೊಂಡಿದ್ದರು. ಸೂರಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಿಜು ಮೋಹನ್, ನವೆಂಬರ್ 9 ರಂದು ರಾತ್ರಿ ವೇಳೆ ಅಲ್ಲೇ ಸಮೀಪದ ಮನೆಯಲ್ಲಿ ವಾಸವಿದ್ದ ಮಹಿಳೆಯನ್ನು ಚುಡಾಯಿಸಿದ್ದರು ಎಂದು ಆರೋಪಿಸಲಾಗಿದೆ. ಆ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು, ಸ್ಥಳೀಯರು ಜಮಾಯಿಸಿ ಬಿಜು ಮೋಹನ್ನನ್ನು ಹಿಡಿದು ಮನೆಯೊಳಗೆ ಕೂಡಿ ಹಾಕಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದಿದ್ದರು ಎಂದು ತಿಳಿದುಬಂದಿದೆ. ಮದ್ಯ ಸೇವಿಸಿದ್ದರೆನ್ನಲಾದ ಬಿಜು ಮೋಹನ್ ರನ್ನು ಸೆಲ್ನಲ್ಲಿ ಇರಿಸಲಾಗಿದ್ದು, ಇಂದು ನಸುಕಿನ ವೇಳೆ 3:30ರ ಸುಮಾರಿಗೆ ಆತ ಸಮೀಪದ ಬಾತ್ ರೂಮಿನಲ್ಲಿ ಕುಸಿದುಬಿದ್ದಿರುವುದು ಕಂಡುಬಂದಿದೆ. ತಕ್ಷಣ ಆತನನ್ನು ಬ್ರಹ್ಮಾವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು, ಪರೀಕ್ಷಿಸಿದಾಗ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
Trending
- ಖ್ಯಾತ ಉದ್ಯಮಿ ತಿರುವೈಲು ಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಹಾಗೂ ಯುವ ಉದ್ಯಮಿ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ
- “ ಸಹಕಾರ ಸಪ್ತಾಹ” ಅಂಗವಾಗಿ ತೌಳವ ಸಹಕಾರ ಮಾಣಿಕ್ಯ ಪ್ರಶಸ್ತಿ” ಹಾಗೂ “ತೌಳವ ಸಹಕಾರ ರತ್ನ ಪ್ರಶಸ್ತಿ” ಗೆ ಆರ್ಜಿ ಆಹ್ವಾನ
- ಇ-ಖಾತಾ ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರು ಹೈರಾಣು:- ಶಾಸಕ ಕಾಮತ್ ಆಕ್ರೋಶ
- ಐಕ್ಯಂ ವಿಶೇಷ ಮಕ್ಕಳ ಶಾಲೆಯಲ್ಲಿ ದೀಪಾವಳಿ ಆಚರಣೆ
- ಉಮ್ರಾ ಯಾತ್ರೆಗೆ ತೆರಳಿದ ಜರ್ಗುಮ್ ಫೌಂಡೇಶನ್ ಸದಸ್ಯರಿಗೆ ಸನ್ಮಾನ
- ಉಡುಪಿ ನಗರಸಭೆ ಎಚ್ಚರಿಕೆ: ಬೀದಿ ನಾಯಿಗಳಿಗೆ ಅನಧಿಕೃತವಾಗಿ ಆಹಾರ ಹಾಕಿದರೆ ಕಾನೂನು ಕ್ರಮ
- ಉಳ್ಳಾಲ: ಛಾಯಾಗ್ರಹಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಗುರುತಿಸಿ ಹಿರಿಯ ಛಾಯಾಗ್ರಹಕ ಅಶೋಕ್ ಅವರಿಗೆ ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಸನ್ಮಾನ
- ರಜತ ಸಂಭ್ರಮದಲ್ಲಿರುವ ಯುವ ವಿಚಾರ ವೇದಿಕೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಕಿರೀಟ.
