ಮಂಗಳೂರು: ಇಂದು ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಿದರು
ನಾಮಪತ್ರ ಸಲ್ಲಿಸಲು ಬಂಟ್ಸ್ ಹಾಸ್ಟೆಲ್ ಪಕ್ಕದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಕಚೇರಿಯಿಂದ ಮೆರವಣಿಗೆಯಲ್ಲಿ ದ.ಕ ಜಿಲ್ಲಾಧಿಕಾರಿ ಕಚೇರಿಗೆ ಬ್ರಿಜೇಶ್ ಚೌಟ ಆಗಮಿಸಿದರು. ಇನ್ನು ನಾಮಪತ್ರವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ಸ್ವೀಕರಿಸಿದರು.
ಚೌಟ ಅವರು ನಾಮಪತ್ರ ಸಲ್ಲಿಸುವ ವೇಳೆ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕಿ ಭಾಗೀರಥಿ ಮುರುಳ್ಯ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೇ ಮಾಧವ ಗೌಡ ಮತ್ತಿತರರು ಜೊತೆಗಿದ್ದರು