ಮಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ರೋಡ್ ಶೋ ವೀಕ್ಷಿಸಲು ಮಂಗಳೂರಿನಲ್ಲಿ ಭಾರೀ ಜನಸ್ತೋಮ ನೆಲೆಸಿದ್ದು ಎಲ್ಲೆಲ್ಲೂ ಜೈಕಾರದ ಜೊತೆ ಹೂಮಳೆಗೈದರು. ಜೊತೆಗೆ ಮೋದಿ ಮೋದಿ ಜೈಕಾರದೊಂದಿಗೆ ಭರ್ಜರಿ ಸ್ವಾಗತ ನಡೆಯಿತು
ಲೇಡಿಹಿಲ್‌ನಲ್ಲಿರುವ ನಾರಾಯಣ ಗುರು ವೃತ್ತದಲ್ಲಿ ಆರಂಭವಾದ ಕಾರ್ಯಕ್ರಮವು ನವಭಾರತ ವೃತ್ತದಲ್ಲಿ ಮುಕ್ತಾಯವಾಯಿತು. ನಾರಾಯಣ ಗುರು ವೃತ್ತದಲ್ಲಿ ಪ್ರಧಾನಿ ಮೋದಿ ಅವರನ್ನು ಆರತಿ ವಿಧಿವಿಧಾನದ ಮೂಲಕ ಸ್ವಾಗತಿಸಲಾಯಿತು, ನಂತರ ರೋಡ್ ಶೋ ಆರಂಭಿಸುವ ಮೊದಲು ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಇಡೀ ಮಾರ್ಗದಲ್ಲಿ ಪ್ರಧಾನಿ ಮೋದಿಯವರ ನೋಟವನ್ನು ಸೆಳೆಯಲು ಉತ್ಸಾಹಿ ಬೆಂಬಲಿಗರಿಂದ ತುಂಬಿ ತುಳುಕುತ್ತಿತ್ತು. ಜನರು ಉತ್ಸಾಹದಿಂದ ಪ್ರಧಾನಿಯನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗುವುದು ಮತ್ತು ಬಿಜೆಪಿ ಧ್ವಜಗಳನ್ನು ಬೀಸುತ್ತಿದ್ದರು.
ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಪರ ಪ್ರಧಾನಿ ನರೇಂದ್ರ ಮೋದಿ ಮತಯಾಚನೆ ಮಾಡಿದರು.
ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಶಾಸಕ ಮಂಗಳೂರು ದಕ್ಷಿಣ ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ಶಾಸಕ ಡಾ ಭರತ್ ವೈ ಶೆಟ್ಟಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಸುಳ್ಯ ಶಾಸಕ ಭಾಗೀರಥಿ ಮುರುಳ್ಯ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು