ಉಡುಪಿ: ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬ್ರಹ್ಮಾವರ ಮಾಬುಕಳ ಸೇತುವೆಯ ಸಮೀಪ ನಡೆದಿದೆ.
ಕುಂದಾಪುರದಿಂದ ಉಡುಪಿಯತ್ತ ಸಾಗುತ್ತಿದ್ದ ಕಾರು ಅತೀವೇಗದಿಂದ ಬಂದು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಬಳಿಕ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು. ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸದ್ಯ ಈ ಕುರಿತು ಬ್ರಹ್ಮಾವರ ಆರಕ್ಷಕ ಠಾಣೆಯ ಸಿಬ್ಬಂದಿಗಳು ಘಟನ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದುಬಂದಿದೆ.
