ವಿಟ್ಲ: ಬೈಕ್ ಸ್ಕಿಡ್ ಆಗಿ ಸವಾರರೊಬ್ಬರು ಮೃತಪಟ್ಟಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ವಿಟ್ಲದ ಅಣ್ಣಪೂರ್ಣ ಟ್ರಾವೆಲ್ಸ್‌ನ ಮಾಲಕ ಕಾಶಿ ಮಠ ಸತ್ಯನಾರಾಯಣ ಭಟ್ (54) ಅವರು ಬೈಕ್ ಸ್ಕಿಡ್ ಆಗಿ ಮೃತಪಟ್ಟ ದುರ್ದೈವಿ.
ಮೃತ ಸತ್ಯನಾರಾಯಣ ಭಟ್ ರವರು ಕನ್ಯಾನದಿಂದ ವಿಟ್ಲ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡು ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳು ಹಾಗು ಮಗಳನ್ನು ಅಗಲಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
