ಸುಳ್ಯ: ಕಳಂಜ ಗ್ರಾಮದ ಅಯ್ಯನಕಟ್ಟೆ ಕ್ರಾಸ್ ಬಳಿ ಆಲ್ಟೋ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಂಬ ಮುರಿದು ಕಾರು ಜಖಂಗೊಂಡ ಘಟನೆ ವರದಿಯಾಗಿದೆ.ಮಹಮ್ಮದ್ ಎಂಬವರಿಗೆ ಸೇರಿದ ಕಾರು ಇದಾಗಿದ್ದು, ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ.ಇನ್ನು ವಿದ್ಯುತ್ ಕಂಬ ಮುರಿದು ಬಿದ್ದ ಪರಿಣಾಮ ವಿದ್ಯುತ್ ಸರಬರಾಜನ್ನು ಕಡಿತಗೊಳಿಸಲಾಗಿತ್ತು. ಕೆ.ಇ.ಬಿ. ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಹೊಸ ಕಂಬ ಹಾಕಿ ರಾತ್ರಿ ವಿದ್ಯುತ್ ಪೂರೈಕೆಯನ್ನು ಸರಿಪಡಿಸಿದರು.
©2021 Tulunada Surya | Developed by CuriousLabs