ಉಡುಪಿ: ನಗರದಲ್ಲಿ ಮಾದಕ ವಸ್ತು ಎಂ.ಡಿ.ಎಂ.ಎ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಆತನಿಂದ 43,800 ಮೌಲ್ಯದ ಎಂ.ಡಿ.ಎಂ.ಎ ಸಹಿತ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ ಹಾಗೂ ಉಡುಪಿ ನಗರ ಠಾಣೆ ಪೊಲೀಸ್ ನಿರೀಕ್ಷಕ ಮಂಜುನಾಥ್. ವಿ ಬಡಿಗೇರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು.ಬಂಧಿತ ಆರೋಪಿ ಇಕ್ಬಾಲ್ (33) ಎಂದು ತಿಳಿಯಲಾಗಿದೆ.ಆರೋಪಿ ಮೂಡನಿಡಂಬೂರು ಗ್ರಾಮದ ಗರಡಿ ರಸ್ತೆಯಲ್ಲಿ ಸ್ಕೂಟಿಯಲ್ಲಿ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 172/2025 ಕಲಂ NARCOTIC DRUGS & PSYCHOTROPIC SUBSTANCES ACT, 1985 (U/s-8(C) 20(b)(II)(A) ರಂತೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Trending
- ಉಡುಪಿ ಕಾರ್ಮಿಕ ಘಟಕ ಸಭೆ: ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿರ್ಣಯ
- ಅವಧಿ ಮುಗಿದ ಗ್ರಾಮ ಪಂಚಾಯತ್ಗಳಿಗೆ ಆಡಳಿತಾಧಿಕಾರಿಗಳ ನೇಮಕ, ಚುನಾವಣೆಗೂ ಮುನ್ನ ತಾತ್ಕಾಲಿಕ ವ್ಯವಸ್ಥೆ ಜಾರಿ
- ಮಂಗಳೂರು | ಮಾದಕವಸ್ತು ವಿರೋಧಿ ಕಾರ್ಯಾಚರಣೆ: ಕಾಲೇಜು ವಿದ್ಯಾರ್ಥಿಗಳ ಅಚ್ಚರಿಯ ತಪಾಸಣೆ – ಫಲಿತಾಂಶಗಳು ಉತ್ತೇಜನಕಾರಿ
- ಬೀದಿ ನಾಯಿಗಳ ಕಾಟ: ರಾಜ್ಯ ಸರ್ಕಾರಗಳು ಹೊಣೆಗಾರಿಕೆ ವಹಿಸಬೇಕು – ಸುಪ್ರೀಂ ಕೋರ್ಟ್ ಕಠಿಣ ಎಚ್ಚರಿಕೆ
- ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ
- ಲೈಂಗಿಕ ದೌರ್ಜನ್ಯಕ್ಕೆ ನಿರಾಕರಿಸಿದ ಟೆಕ್ಕಿ ಶರ್ಮಿಳಾ ಹತ್ಯೆ: ಬೆಂಕಿ ಅವಘಡದ ಹಿಂದೆ ಭೀಕರ ಸತ್ಯ ಬಯಲು | 18 ವರ್ಷದ ಆರೋಪಿಯ ಬಂಧನ
- ಸುನಂದ ಕೋಟ್ಯಾನ್ ಅವರಿಗೆ ಕರುನಾಡ ಕಾಯಕ ಯೋಗಿ ರಾಜ್ಯ ಪ್ರಶಸ್ತಿ
