Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!

    1 June 2025

    ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ

    31 May 2025

    ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!

    30 May 2025
    Facebook WhatsApp Telegram
    Trending
    • ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!
    • ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ
    • ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!
    • ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ
    • ಮಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಸುದೀರ್ ರೆಡ್ಡಿ ನೇಮಕ
    • ದಕ್ಷಿಣ ಕನ್ನಡ ಎಸ್ ಪಿ ಜಾಗಕ್ಕೆ ಡಾ. ಅರುಣ್ ನೇಮಕ, ಉಡುಪಿ ಎಸ್ ಪಿ ಆಗಿ ಹರಿರಾಮ್ ಶಂಕರ್
    • ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕರಾದ ಕೃಷ್ಣವೇಣಿ ಮತ್ತು ಇತರರು ಮಂಗಳೂರು ಲೋಕಾಯುಕ್ತ ಪೊಲೀಸ್ ಬಲೆಗೆ
    • ರಾಯಚೂರು | ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತ್ಯು ಆರೋಪ; ಕುಟುಂಬಸ್ಥರಿಂದ ಆ್ಯಂಬುಲೆನ್ಸ್ ಮೇಲೆ ಕಲ್ಲು ತೂರಾಟ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, June 1
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಕಾಶ್ಮೀರ ಉಗ್ರರ ದಾಳಿ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಬೇಕು ಇಂತಹ ಸಂದರ್ಭದಲ್ಲಿ ಕೇಂದ್ರ ಸರಕಾರ ಜೊತೆ ನಾವಿದ್ದೇವೆ ಡಿಸಿಎಂ ಡಿಕೆ ಶಿವಕುಮಾರ್

    ಕಾಶ್ಮೀರ ಉಗ್ರರ ದಾಳಿ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಬೇಕು ಇಂತಹ ಸಂದರ್ಭದಲ್ಲಿ ಕೇಂದ್ರ ಸರಕಾರ ಜೊತೆ ನಾವಿದ್ದೇವೆ ಡಿಸಿಎಂ ಡಿಕೆ ಶಿವಕುಮಾರ್

    Tulunada SuryaBy Tulunada Surya23 April 2025Updated:24 April 2025 ಸುದ್ದಿ No Comments2 Mins Read
    Share
    Facebook WhatsApp
    Share on:

    “ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

    ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಜಾಗೃತವಾಗಿ ಕೆಲಸ ಮಾಡಬೇಕಿದೆ.

    ಮುಖ್ಯಮಂತ್ರಿಗಳು ಈ ವಿಚಾರ ತಿಳಿದ ಕೂಡಲೇ ತಕ್ಷಣವೇ ರಾಜ್ಯ ಸರ್ಕಾರದ ಪರವಾಗಿ ಸಚಿವ ಸಂತೋಷ ಲಾಡ್ ಅವರ ಮುಖಂಡತ್ವದಲ್ಲಿ ಒಂದು ತಂಡವನ್ನು ಕಳುಹಿಸಿದ್ದಾರೆ ಎಂದು ತಿಳಿಸಿದರು.

    ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ. ಈ ವಿಚಾರದಲ್ಲಿ ನಮ್ಮ ಪಕ್ಷ ಕೇಂದ್ರ ಸರ್ಕಾರದ ಪರ ನಿಲ್ಲುವುದಾಗಿ ತಿಳಿಸಿದೆ. ಕೇಂದ್ರ ಸರ್ಕಾರ ಈ ಭಯೋತ್ಪಾದಕರನ್ನು ಸದೆಬಡಿಯಬೇಕು.

    ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರೂ ಇವುಗಳನ್ನು ಬುಡಸಮೇತ ಕಿತ್ತೊಗೆಯಬೇಕು.

    ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು ಎಂದು ಹೇಳಿದರು. ಈ ಘಟನೆ ವಿದೇಶಾಂಗ ನೀತಿಯಿಂದ ಪ್ರವಾಸಿಗರು ಹಾಗೂ ದೇಶದ ಜನರ ಮೇಲೆ ಪ್ರಭಾವ ಬೀರುವುದರಿಂದ ಕೇಂದ್ರ ಸರ್ಕಾರ ಈ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯಬೇಕು.

    ನಾನು ಈಗಷ್ಟೇ ದಾಳಿಯಲ್ಲಿ ಮೃತರ ಕುಟುಂಬದವರ ಜತೆ ಚರ್ಚೆ ಮಾಡಿದೆ. ಶಿವಮೊಗ್ಗ ಜಿಲ್ಲಾ ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿದ್ದು, ಮೃತರ ಕುಟುಂಬದವರನ್ನು ಭೇಟಿ ಮಾಡುವಂತೆ ತಿಳಿಸಿದ್ದೇನೆ” ಎಂದರು.

    ಧರ್ಮದ ಆಧಾರದ ಮೇಲೆ ಹತ್ಯೆ ಮಾಡಿರುವ ದಾಳಿಯನ್ನು ಇದೇ ಮೊದಲ ಬಾರಿಗೆ ನೋಡಿದ್ದೇನೆ. ನಮ್ಮ ಸಮಾಜ ಎತ್ತ ಸಾಗುತ್ತಿದೆ ಎಂದು ಆಘಾತವಾಗಿದೆ.

    ಇದನ್ನು ಸಹಿಸಲು ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದರು.

    ಗುಪ್ತಚರ ಇಲಾಖೆ ವೈಫಲ್ಯ ಇದೆ ಎಂದು ಭಾವಿಸುತ್ತೀರಾ ಎಂದು ಕೇಳಿದಾಗ, “ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಈ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ.

    ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದು ಈ ವಿಚಾರವನ್ನು ಚರ್ಚಿಸಬೇಕು. ದೇಶವನ್ನು ರಕ್ಷಣೆ ಮಾಡುವುದು ನಮ್ಮ ಮೊದಲ ಆದ್ಯತೆ” ಎಂದು ತಿಳಿಸಿದರು

    Share on:

    Keep Reading

    ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!

    ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ

    ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.