Thursday, April 25, 2024
spot_img
More

    Latest Posts

    ಚಾಮರಾಜನಗರ ದುರಂತ: ಮೃತರ ಕುಟುಂಬಕ್ಕೆ ತಲಾ 15 ಲಕ್ಷ ರೂ. ಪರಿಹಾರ ಕೋರಿ ಅರ್ಜಿ

    ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್‌ ದುರಂತದಲ್ಲಿ ಮೃತಪಟ್ಟ ಸೋಂಕಿತರ ಕುಟುಂಬಗಳಿಗೆ ತಲಾ 15 ಲಕ್ಷ ರೂ. ಪರಿಹಾರ ನೀಡುವಂತೆ ಸರಕಾರಕ್ಕೆ ಆದೇಶ ನೀಡಬೇಕೆಂದು ಕೋರಿರುವ ಅರ್ಜಿಯನ್ನು ಪ್ರಾಥಮಿಕ ತನಿಖಾ ವರದಿ ನಂತರ ಪರಿಗಣಿಸುವುದಾಗಿ ಹೈಕೋರ್ಟ್‌ ಆದೇಶಿಸಿದೆ.

    ಚಾಮರಾಜನಗರದವರೇ ಆದ ವಕೀಲ ಕೆ.ಎಂ.ಶ್ರೀನಿವಾಸಮೂರ್ತಿ ಸಲ್ಲಿಸಿದ್ದ ಪಿಐಎಲ್‌ನ ಮನವಿ ಆಲಿಸಿದ ಸಿಜೆ ಎ.ಎಸ್‌. ಓಕ್‌ ನೇತೃತ್ವದ ನ್ಯಾಯಪೀಠ, ಸರಕಾರದಿಂದ ನೇಮಿಸಿರುವ ಅಧಿಕಾರಿ ಅಥವಾ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಮಿತಿ ವರದಿ ಬರುವವರೆಗೆ ಆ ಮನವಿಯನ್ನು ಬಾಕಿ ಇಡಲಾಗುವುದು ಎಂದು ತಿಳಿಸಿದೆ.

    ಅರ್ಜಿದಾರರು ಕೋವಿಡ್‌-19 ಸೋಂಕಿನಿಂದ ಮೃತಪಟ್ಟ ಎಲ್ಲರ ಮೃತದೇಹಗಳ ಅಟಾಪ್ಸಿ ನಡೆಸಬೇಕು. ಆ ಮೂಲಕ ಅವರು ನಿಜವಾಗಿಯೂ ಸೋಂಕಿನಿಂದ ಸಾವನ್ನಪ್ಪಿದ್ದಾರೆಯೇ ಇಲ್ಲವೋ ಎಂಬುದನ್ನು ಪತ್ತೆ ಹಚ್ಚಬೇಕೆಂದು ಕೋರಿದ್ದಾರೆ. ಆದರೆ, ಈ ಹಂತದಲ್ಲಿ ಸೋಂಕಿನಿಂದ ಸಾವನ್ನಪ್ಪುವ ಪ್ರತಿಯೊಬ್ಬ ವ್ಯಕ್ತಿಯ ಮೃತದೇಹವನ್ನು ಅಟಾಪ್ಸಿ ನಡೆಸಬೇಕೆಂದು ಆದೇಶಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss