ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 17ರ ಮಂಗಳವಾರ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ, ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಕಾಲೇಜಿಗೆ ರಜೆ ಘೋಷಿಸಿರುವುದಿಲ್ಲ.
Trending
- ಡಿಸೆಂಬರ್ 5 ರಂದು ಬೆಳಿಗ್ಗೆ 8.55ಕ್ಕೆ ಶಿಲಾನ್ಯಾಸ ಕಾರ್ಯಕ್ರಮ
- ಯಕ್ಷಗಾನ ತಾಳಮದ್ದಳೆ ಸಪ್ತಾಹ ಸಮಾರೋಪ – ಯಕ್ಷಾಂಗಣ ಪ್ರಶಸ್ತಿ ಪ್ರದಾನ
- “ಎಂಸಿಎಫ್ ಹೆಸರು ಉಳಿಸಿ” ಅಭಿಯಾನ – ಐತಿಹಾಸಿಕ ಮೊದಲ ಸಭೆ ಮಂಗಳೂರಿನಲ್ಲಿ ಯಶಸ್ವಿ
- ಕಾಪು : ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಭೀಕರ ಅಪಘಾತ – ನಾಲ್ವರು ಸ್ಥಳಾಂತರಿಸುವ ವೇಳೆ ಮೃತ್ಯು
- ತೀಯಾ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಅಗತ್ಯ – ಸದಾಶಿವ ಉಳ್ಳಾಲ್
- ಡಿ.ಕೆ. ಟ್ರಾನ್ಸ್ಪೋರ್ಟ್ & ಲಾಜಿಸ್ಟಿಕ್ ಸರ್ವೀಸಸ್ – ಹೊಸ ಕಚೇರಿ ಉದ್ಘಾಟನೆ
- ಪಿಲಿಪಂಜ” ತುಳು ಚಲನಚಿತ್ರದ ಎರಡನೇ ಹಾಡಾದ ಫ್ರೆಂಡ್ಷಿಪ್ ಸಾಂಗ್, ಭಾನುವಾರ ಮಂಗಳೂರಿನ ಭಾರತ್ ಮಾಲ್ನಲ್ಲಿ ಅದ್ಧೂರಿಯಾಗಿ ಬಿಡುಗಡೆ
- ಉಡುಪಿ: ಪ್ರಧಾನಿ ನರೇಂದ್ರ ಮೋದಿ ಭವ್ಯ ರೋಡ್ ಶೋ – ಜನಸಾಗರದ ನಡುವೆ ಭಾವಪೂರ್ಣ ಸ್ವಾಗತ
