ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ಡೊಂಕ ಬಂದರಿನಲ್ಲಿ ಲಂಗರು ಹಾಕಲಾಗಿದ್ದ ಪರ್ಷಿಯನ್ ಮೀನುಗಾರಿಕಾ ಬೋಟ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೋಟ್ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ನಡೆದಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯ ಮೀನುಗಾರರು ಹಾಗೂ ಸಾರ್ವಜನಿಕರು ಜಾಗರೂಕರಾಗಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಆದರೆ ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಬೋಟ್ ಅನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಪರಿಣಾಮ, ಬೋಟ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅದರಲ್ಲಿದ್ದ ಬೆಲೆಬಾಳುವ ಮೀನುಗಾರಿಕಾ ಬಲೆಗಳು, ಲಕ್ಷಾಂತರ ರೂಪಾಯಿ ಮೌಲ್ಯದ ಇಂಜಿನ್ಗಳು ಹಾಗೂ ಇತರ ಮೀನುಗಾರಿಕಾ ಉಪಕರಣಗಳು ಬೆಂಕಿಗಾಹುತಿಯಾಗಿವೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಅಗ್ನಿ ಅವಘಡದಿಂದ ಸುಮಾರು ₹30 ಲಕ್ಷಕ್ಕೂ ಅಧಿಕ ಮೌಲ್ಯದ ಆಸ್ತಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಗ್ನಿ ಅವಘಡದ ಕಾರಣ ಹಾಗೂ ನಷ್ಟದ ನಿಖರ ಪ್ರಮಾಣ ತನಿಖೆಯ ಬಳಿಕವೇ ತಿಳಿದುಬರಲಿ
