Tuesday, September 17, 2024
spot_img
More

    Latest Posts

    ಬಿಬಿಎಂಪಿ ಬೆಡ್ ಬ್ಲಾಕಿಂಗ್ ಹಗರಣ ಸಿಸಿಬಿ ತನಿಖೆಗೆ: ಕಮಲ್ ಪಂತ್

    ಬೆಂಗಳೂರು, ಮೇ 4: ಬೃಹತ್ ಬೆಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿತರಿಗೆ ಆಸ್ಪತ್ರೆಗೆ ದಾಖಲಾಗಲು ಬೆಡ್ ಸಿಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದರ ಹಿಂದೆ ಭಾರಿ ಅವ್ಯವಹಾರ ನಡೆದಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹಾಗೂ ತಂಡ ಇಂದು ಅಕ್ರಮ ಬಯಲಿಗೆಳೆದಿದ್ದರು. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆಗೂ ಆಗ್ರಹಿಸಿದ್ದರು. ಈಗ ಈ ಬಗ್ಗೆ ಸಿಸಿಬಿ ತನಿಖೆ ನಡೆಸಲಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಟ್ವೀಟ್ ಮಾಡಿದ್ದಾರೆ.

    ಬಿಬಿಎಂಪಿ ವಾರ್ ರೂಮ್ ಉಸ್ತುವಾರಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇತ್ತೀಚೆಗೆ ಬದಲಾಯಿಸಿ ಅರವಿಂದ ಲಿಂಬಾವಳಿಗೆ ಹೊಣೆ ನೀಡಲಾಗಿತ್ತು. ಆದರೆ, ಈ ವಾರ್ ರೂಮ್ ಕಾರ್ಯ ನಿರ್ವಹಣೆ ಬಗ್ಗೆ ಅಪಸ್ವರ ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್ ರೆಡ್ಡಿ, ರವಿ ಸುಬ್ರಹ್ಮಣ್ಯ, ಉದಯ್ ಗರುಡಾಚಾರ್ ಅವರು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಬೆಡ್ ಬ್ಲಾಕಿಂಗ್ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿರುವುವುದನ್ನು ತೇಜಸ್ವಿ ಸೂರ್ಯ ಬಯಲಿಗೆಳೆದಿದ್ದರು.

    ಬೆಡ್ ಹಗರಣ ಬಯಲಿಗೆಳೆದ ತೇಜಸ್ವಿಗೆ ಕಂಗ್ರಾಟ್ಸ್ ಎಂದ ಡಿಕೆ ಶಿವಕುಮಾರ್ ಬೆಡ್ ಹಗರಣ ಬಯಲಿಗೆಳೆದ ತೇಜಸ್ವಿಗೆ ಕಂಗ್ರಾಟ್ಸ್ ಎಂದ ಡಿಕೆ ಶಿವಕುಮಾರ್


    ಈ ಬಗ್ಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಕಮಲ್ ಪಂತ್, ಬಿಬಿಎಂಪಿ ಪೋರ್ಟಲ್ ಮೂಲಕ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಬೆಡ್ ಕಾಯ್ದಿರಿಸುವ ವಿಧಾನದಲ್ಲಿ ಅಕ್ರಮ ಎಸಗಿದವರ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಅಕ್ರಮದಲ್ಲಿ ಭಾಗಿಯಾದವರ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಕೇಂದ್ರ ಅಪರಾಧ ಶಾಖೆ (ಸಿಸಿಬಿ) ಗೆ ವರ್ಗಾಯಿಸಲಾಗಿದೆ ಎಂದಿದ್ದಾರೆ

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss