ಬ್ರಹ್ಮಾವರ: ಮಹಿಳೆಗೆ ಚುಡಾಯಿಸಿದ ಆರೋಪದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತಂದಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ಇಂದು ಸೆಲ್ನ ಬಾತ್ ರೂಮಿನೊಳಗೆ ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಕೇರಳ ರಾಜ್ಯ ಕೊಲ್ಲಂ ಮೂಲದ ಬಿಜು ಮೋಹನ್ (42) ಎಂದು ಗುರುತಿಸಲಾಗಿದೆ. ಇವರು ಹಂಗಾರಕಟ್ಟೆ ಮೀನು ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಮೂರು ದಿನಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿಕೊಂಡಿದ್ದರು. ಸೂರಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಿಜು ಮೋಹನ್, ನವೆಂಬರ್ 9 ರಂದು ರಾತ್ರಿ ವೇಳೆ ಅಲ್ಲೇ ಸಮೀಪದ ಮನೆಯಲ್ಲಿ ವಾಸವಿದ್ದ ಮಹಿಳೆಯನ್ನು ಚುಡಾಯಿಸಿದ್ದರು ಎಂದು ಆರೋಪಿಸಲಾಗಿದೆ. ಆ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು, ಸ್ಥಳೀಯರು ಜಮಾಯಿಸಿ ಬಿಜು ಮೋಹನ್ನನ್ನು ಹಿಡಿದು ಮನೆಯೊಳಗೆ ಕೂಡಿ ಹಾಕಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದಿದ್ದರು ಎಂದು ತಿಳಿದುಬಂದಿದೆ. ಮದ್ಯ ಸೇವಿಸಿದ್ದರೆನ್ನಲಾದ ಬಿಜು ಮೋಹನ್ ರನ್ನು ಸೆಲ್ನಲ್ಲಿ ಇರಿಸಲಾಗಿದ್ದು, ಇಂದು ನಸುಕಿನ ವೇಳೆ 3:30ರ ಸುಮಾರಿಗೆ ಆತ ಸಮೀಪದ ಬಾತ್ ರೂಮಿನಲ್ಲಿ ಕುಸಿದುಬಿದ್ದಿರುವುದು ಕಂಡುಬಂದಿದೆ. ತಕ್ಷಣ ಆತನನ್ನು ಬ್ರಹ್ಮಾವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು, ಪರೀಕ್ಷಿಸಿದಾಗ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
Trending
- ಮಂಗಳೂರು : ಕಾಣದ ಕೈಗಳು ಹಾಗೂ ಸಿಬ್ಬಂದಿ ವರ್ಗದ ತಪ್ಪಿನಿಂದಾಗಿ ಸಂಸ್ಥೆಗೆ ಕೆಟ್ಟ ಹೆಸರು ಬಂದಿದೆ,ಸಿಕ್ಕಿಬಿದ್ದ ಉದ್ಯೋಗಿಗಳು ಸಂಸ್ಥೆಯಿಂದ ವಜಾ : ಡ್ರೀಮ್ ಡೀಲ್ ಗ್ರೂಪ್ ..!
- ತುಳುನಾಡು ರಕ್ಷಣಾ ವೇದಿಕೆ ಉಡುಪಿ ಘಟಕ ವತಿಯಿಂದ ಸಮಾಜ ಸುಧಾರಕ ಸಂತ ಕನಕದಾಸರ ಜಯಂತಿ ಆಚರಣೆ
- ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಪ್ರಮುಖ ಪದಾಧಿಕಾರಿಗಳ ಸಭೆ ಹಲವು ಪ್ರಮುಖರ ಸೇರ್ಪಡೆ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಸುನಿಲ್ ಫೆರ್ನಾಂಡಿಸ್ ಆಯ್ಕೆ
- ಹೊಳೆಗೆ ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ, ನೀರಿಗೆ ಹಾರಿ ಬಂಧಿಸಿದ ಪೊಲೀಸರು
- ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಮಹಿಳಾ ಘಟಕ ವತಿಯಿಂದ ಓನಕೆ ಒಬ್ಬವ ಜಯಂತಿ ಆಚರಣೆ
- ತುಳುನಾಡ ರಕ್ಷಣಾ ವೇದಿಕೆ ಕಾರ್ಮಿಕ ಘಟಕ ಹಲವು ಪ್ರಮುಖರ ಸೇರ್ಪಡೆ
- ಬ್ರಹ್ಮಾವರ ಠಾಣೆಯಲ್ಲಿ ಆರೋಪಿ ಲಾಕಪ್ ಡೆತ್ – ಹಿರಿಯ ಅಧಿಕಾರಿಗಳ ಭೇಟಿ
- ಮಂಗಳೂರು : ಲೇಡಿಗೋಷನ್ ಆಸ್ಪತ್ರೆಯ ಮಹಡಿಯಿಂದ ಹಾರಿ ಬಾಣಂತಿ ಆತ್ಮಹತ್ಯೆ