ಇಸ್ಲಾಮಾಬಾದ್ : ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರ ನೆಲೆಯನ್ನು ಗುರಿಯಾಗಿಸಿ ಭಾರತ ನಡೆಸಿದ ಮಿಲಿಟರಿ ಕಾರ್ಯಾಚರಣೆಯ ಮರುದಿನವೇ ಪಾಕಿಸ್ತಾನದ ಲಾಹೋರ್ ನಲ್ಲಿ ಮೂರು ಸ್ಫೋಟ ಸಂಭವಿಸಿದ್ದು ಜನರು ಭಯದಿಂದ ಮನೆಯಿಂದ ಹೊರಗೋಡಿದರು ಎಂದು ಮೂಲಗಳಿಂದ ತಿಳಿದು ಬಂದಿದೆ
ಗುರುವಾರ ಲಾಹೋರ್ ನ ಅತ್ಯಂತ ಸೂಕ್ಷ್ಮ ಜಿಲ್ಲೆ ಎಂದು ಗುರುತಿಸಿಕೊಂಡಿರುವ ಗುಲ್ಬೆರ್ಗ್‍ನ ವಾಲ್ಟನ್ ವಿಮಾನ ನಿಲ್ದಾಣದ ಬಳಿಯ ರಸ್ತೆಯಲ್ಲಿ ಕೆಲ ನಿಮಿಷಗಳ ಅಂತರದಲ್ಲಿ ಪ್ರಬಲ ಸ್ಫೋಟ ಸಂಭವಿಸಿದೆ. ವಾಲ್ಟನ್ ವಿಮಾನ ನಿಲ್ದಾಣದ 9 ಕಿ.ಮೀ ವ್ಯಾಪ್ತಿಯಲ್ಲಿರುವ ಡಿಎಚ್‍ಎ 3 ಮತ್ತು 4ನೇ ಹಂತದಲ್ಲಿ ಸ್ಫೋಟ ಸಂಭವಿಸಿದ್ದು ಬೆಂಕಿಯ ಜ್ವಾಲೆ ಮತ್ತು ಹೊಗೆಯ ಕಾರ್ಮೋಡ ಆಗಸಕ್ಕೆ ವ್ಯಾಪಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಾಲ್ಟನ್ ವಿಮಾನ ನಿಲ್ದಾಣದ ಬಳಿಯ ಗೋಪಾಲ ನಗರ ಮತ್ತು ನಸೀರಾಬಾದ್ ನಗರಗಳಲ್ಲಿಯೂ ಸ್ಫೋಟ ಸಂಭವಿಸಿದೆ. ಎಂದು ತಿಳಿದು ಬಂದಿದೆ