ಮಂಗಳೂರು: ತನ್ನ ಪುಟ್ಟ ಮಗುವನ್ನೆತ್ತಿಕೊಂಡು ತಂದೆಯೋರ್ವರು ಗುರುಪುರ ನದಿಯ ಸೇತುವೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ. ಕೈಕಂಬದ ನಿವಾಸಿ ಸಂದೀಪ್ ಎಂಬವರು ತಮ್ಮ 2 ವರ್ಷದ ಮಗುವನ್ನೆತ್ತಿಕೊಂಡು ಗುರುಪುರ ಸೇತುವೆಯ ಮೇಲೇರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಅವರು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆಂದು ತಿಳಿದು ಉಪಾಯದಿಂದ ಮನವೊಲಿಸಿ ಮಗು ಸಹಿತ ಅವರನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಸಂದೀಪ್ ಬಳಿ ವಿಚಾರಿಸಿದಾಗ ತಾನು ಮಗುವಿಗೆ ಹೊಳೆ ತೋರಿಸುವ ಉದ್ದೇಶದಿಂದ ಸೇತುವೆಯ ಮೇಲೇರಿರುವುದಾಗಿ ತಿಳಿಸಿದ್ದಾರೆ. ಬಳಿಕ ಪೊಲೀಸರು ಅವರಿಗೆ ಬುದ್ಧಿವಾದ ಹೇಳಿ ಮನೆಗೆ ಕಳುಹಿಸಿ ಕೊಟ್ಟಿದ್ದಾರೆ
Trending
- ಭಾರತ ದಾಳಿಗೆ ಪಾಕಿಸ್ತಾನ ತತ್ತರ
- ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ
- ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ
- Kannada Sangha Bahrain has elected a new Executive Committee
- ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ
- ಸಿಂಧೂರ ಆಪರೇಷನ್ ಮೂಲಕ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ.
- ಉಲಾಯಿ ಪಿದಾಯಿ ಜುಗಾರಿ ಆಟ : ಐದು ಮಂದಿ ಉಲಾಯಿ…!!
- ಯಕ್ಷಗಾನ ಮತ್ತು ಸಾಮಾಜಿಕ ಧುರೀಣ ಪಣಿಯೂರು ಕರುಣಾಕರ ಶೆಟ್ಟರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ