Monday, November 29, 2021

ಜ್ವರದಿಂದ ಬಳಲುತ್ತಿದ್ದ ಯುವಕ ಸಾವು

ಜ್ವರದಿಂದ ಬಳಲುತ್ತಿದ್ದ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗೋಳಿತೊಟ್ಟಿನಲ್ಲಿ ನಡೆದಿದೆ. ಗೋಳಿತೊಟ್ಟು ಗ್ರಾಮದ ಡೆಬ್ಬೇಲಿ ನಿವಾಸಿ ಮಹೇಶ್ (27) ಮೃತ ಯುವಕ. ಇವರು ಕೆಲ ದಿನಗಳಿಂದ...
More

    Latest Posts

    ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

    ದಾವಣಗೆರೆ: ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

    ಬ್ರಹ್ಮಾವರ: ಅಂತಾರಾಷ್ಟ್ರೀಯ ಈಜು ಸ್ಪರ್ಧೆಗೆ ಗುಂಡ್ಮಿ ಗೋಪಾಲ ಖಾರ್ವಿ ಆಯ್ಕೆ

    ಬ್ರಹ್ಮಾವರ: ಮಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಮಾಸ್ಟರ್ಸ್ ಈಜು ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಗುಂಡ್ಮಿ ನಿವಾಸಿ ಗೋಪಾಲ ಖಾರ್ವಿ ಕೋಡಿಕನ್ಯಾಣ ಅವರು ನಾಲ್ಕು ಪದಕ ಪಡೆದು ಅಂತಾರಾಷ್ಟ್ರೀಯ ಈಜು ಚಾಂಪಿಯನ್ ಶಿಪ್...

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಐಪಿಎಲ್ ಡ್ರೀಮ್ 11 ಫ್ಯಾಂಟಸಿ ಆಟದಲ್ಲಿ 1 ಕೋಟಿ ರೂ. ಗೆದ್ದ ಬಿಹಾರದ ಮಧುಬನಿ ಜಿಲ್ಲೆಯ ಕ್ಷೌರಿಕ!

    ಸಾಂಧರ್ಬಿಕ ಚಿತ್ರ

    ಮಧುಬನಿ : ಬಿಹಾರದ ಮಧುಬನಿ (Bihar Madhubani) ಜಿಲ್ಲೆಯ ಕ್ಷೌರಿಕನೊಬ್ಬ ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) ಡ್ರೀಮ್ 11ನ (Dream 11) ‘ಡ್ರೀಮ್ ಟೀಮ್” (Dream Team) ಸ್ಪರ್ಧೆಯಲ್ಲಿ 1 ಕೋಟಿ ರೂ. ಗೆದ್ದು ಇತಿಹಾಸ ಬರೆದಿದ್ದಾರೆ. ಮಧುಬನಿಯ ಅಂಧರಥಂಡಿ ಬ್ಲಾಕ್‌ನ ನಾನೌರ್ ಚೌಕ್‌ನಲ್ಲಿ ಕ್ಷೌರಿಕ ಅಂಗಡಿ ನಡೆಸುತ್ತಿರುವ ಅಶೋಕ್ ಕುಮಾರ್ (Ashok Kumar), ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವಿನ ಪಂದ್ಯಕ್ಕೆ ತಮ್ಮ ಡ್ರೀಮ್ ಟೀಮ್ ಆಟಗಾರರನ್ನು ಆಯ್ಕೆ ಮಾಡಿದ್ದರು. ಕುಮಾರ್ ಅವರ ಆಟಗಾರರ ಆಯ್ಕೆ ಗಮನ ಸೆಳೆದಿದ್ದು, ಭಾನುವಾರ ಸ್ಪರ್ಧೆಯು ಕೊನೆಗೊಂಡಿದ್ದು, ಅಶೋಕ್ ಕುಮಾರ್ ಉನ್ನತ ಬಹುಮಾನ ವಿಜೇತ ಎಂದು ಘೋಷಿಸಲಾಯಿತು.

    ಡ್ರೀಮ್ 11 ಒಂದು ವಾಸ್ತವ ಫ್ಯಾಂಟಸಿ ಆಟವಾಗಿದ್ದು, ಆಟ ಆರಂಭವಾಗುವ ಮುನ್ನ ತಮ್ಮ ತಂಡದ ಆಯ್ಕೆಗಾಗಿ ಎರಡು ತಂಡಗಳ ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ಇರುತ್ತದೆ. ತಂಡದ ಆಯ್ಕೆಯ ನಂತರ ಆಟಗಾರರ ಪ್ರದರ್ಶನದ ಆಧಾರದ ಮೇಲೆ ಅಂಕಗಳನ್ನು ಲೆಕ್ಕ ಹಾಕಲಾಗುತ್ತದೆ. ಈ ಅಂಕಗಳ ಮೂಲಕವೇ ಕ್ಷೌರಿಕ ಅಶೋಕ್ ಕುಮಾರ್​ 1 ಕೋಟಿ ರೂ ಗೆದ್ದಿದ್ದಾರೆ ಎಂದು ತಿಳಿದುಬಂದಿದೆ.

    ಈ ಬಗ್ಗೆ ಮಾತನಾಡಿರುವ ಅಶೋಕ್ ಕುಮಾರ್, “ಪಂದ್ಯದ ನಂತರ, ನಾನು ಮೊದಲ ಸ್ಥಾನಕ್ಕೆ ಬಂದು ಒಂದು ಕೋಟಿ ಗೆದ್ದಿದ್ದೇನೆ. ಶೀಘ್ರದಲ್ಲೇ ಅಧಿಕೃತ ಕರೆ ಕೂಡ ಬಂದಿತು. ಮುಂದಿನ ಎರಡು ದಿನಗಳಲ್ಲಿ 70 ಲಕ್ಷ ಮೊತ್ತವನ್ನು ನನ್ನ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಲಾಗಿತ್ತು. ಹಣ ತೆರಿಗೆ ಕಡಿತದ ನಂತರ ಪಾವತಿಸಲಾಗಿದೆ. ಆ ದಿನ ರಾತ್ರಿ ನಿಜಕ್ಕೂ ನನಗೆ ನಿದ್ರೆ ಬರಲಿಲ್ಲ “ಎಂದು ಅವರು ತಿಳಿಸಿದ್ದಾರೆ.

    “ನಾನು ಚೆನ್ನೈ ಸೂಪರ್ ಕಿಂಗ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದಲ್ಲಿ ಕೇವಲ 50 ರೂ. ಪ್ರವೇಶ ಶುಲ್ಕವನ್ನು ಪಾವತಿಸಿ ನನ್ನ ನೆಚ್ಚಿನ ತಂಡವನ್ನು ಆಯ್ಕೆ ಮಾಡಿದ್ದೆ. ಆದರೆ, ಈ ಪ್ರಮಾಣದ ಹಣ ಗಳಿಸುತ್ತೇನೆ ಎಂದು ಭಾವಿಸಿರಲಿಲ್ಲ. ನಾನು ಕ್ಷೌರಿಕನಾಗಿ ನನ್ನ ಕೆಲಸವನ್ನು ಪ್ರೀತಿಸುತ್ತೇನೆ ಮತ್ತು ಭವಿಷ್ಯದಲ್ಲಿ ಈ ಕೆಲಸವನ್ನೇ ಮುಂದುವರಿಸುತ್ತೇನೆ” ಎಂದು ಅಶೋಕ್ ಕುಮಾರ್​ ತಿಳಿಸಿದ್ದಾರೆ.

    ಅಶೋಕ್ ಕುಮಾರ್ ಈ ಹಿಂದೆ ಹಲವು ಬಾರಿ ‘ಡ್ರೀಮ್ ಟೀಮ್’ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು, ಆದಾಗ್ಯೂ, ಅವರು ಮೊದಲ ಬಾರಿಗೆ ಜಾಕ್‌ಪಾಟ್ ಹೊಡೆದಿದ್ದಾರೆ. ಅವರು ಈ ಹಣವನ್ನು ತನ್ನ ಸಾಲವನ್ನು ತೀರಿಸಲು ಮತ್ತು ಕುಟುಂಬಕ್ಕಾಗಿ ಒಂದು ಮನೆಯನ್ನು ಕಟ್ಟಲು ಬಳಸುವ ಯೋಜನೆ ಹೊಂದಿದ್ದಾರೆ ಎನ್ನಲಾಗಿದೆ.

    Latest Posts

    ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

    ದಾವಣಗೆರೆ: ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

    ಬ್ರಹ್ಮಾವರ: ಅಂತಾರಾಷ್ಟ್ರೀಯ ಈಜು ಸ್ಪರ್ಧೆಗೆ ಗುಂಡ್ಮಿ ಗೋಪಾಲ ಖಾರ್ವಿ ಆಯ್ಕೆ

    ಬ್ರಹ್ಮಾವರ: ಮಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಮಾಸ್ಟರ್ಸ್ ಈಜು ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಗುಂಡ್ಮಿ ನಿವಾಸಿ ಗೋಪಾಲ ಖಾರ್ವಿ ಕೋಡಿಕನ್ಯಾಣ ಅವರು ನಾಲ್ಕು ಪದಕ ಪಡೆದು ಅಂತಾರಾಷ್ಟ್ರೀಯ ಈಜು ಚಾಂಪಿಯನ್ ಶಿಪ್...

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    Don't Miss

    ಬಂಟ್ವಾಳ: ನಾಟಿ ವೈದ್ಯೆ ಚಂದ್ರಾವತಿ ನಿಧನ

    ಬಂಟ್ವಾಳ: ಬಂಟ್ವಾಳ ತಾಲೂಕು ಬಡಗಕಜೆಕಾರು ಗ್ರಾಮದ ಮಾಡಪಲ್ಕೆ ದಿ. ಡೊಂಬಯ್ಯ ಪೂಜಾರಿಯವರ ಪತ್ನಿ ಚಂದ್ರಾವತಿ ಅವರು ಅಸೌಖ್ಯದಿಂದ ಬಳಲುತ್ತಿದ್ದು ಇಂದು ಬೆಳಗ್ಗೆ ನಿಧನರಾದರು. ಹಿರಿಯರಾದ (105...

    ಮಂಗಳೂರು: ‘ಮಾಮ್‌’ ನೂತನ ಪದಾಧಿಕಾರಿಗಳ ಆಯ್ಕೆ

    ಮಂಗಳೂರು: ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳ ಗಂಗೋತ್ರಿ (ಮಾಮ್) ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಡೆದಿದ್ದು, ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

    ಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

    ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ...

    ಪಾಣೆಮಂಗಳೂರು ನೇತ್ರಾವತಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ!

    ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ (62) ಮೃತಪಟ್ಟ ವ್ಯಕ್ತಿ....

    ಕಾಪು: ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವು

    ಕಾಪು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನ.26ರ ಶುಕ್ರವಾರ ಮುಂಜಾನೆ ನಡೆದಿದೆ. ಮೃತರನ್ನು ಮಲ್ಲಾರು ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಜಾಕ್ (48)...