ಎಕ್ಕೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಸಮ್ಮೇಳನ -2022 ಕಾರ್ಯಕ್ರಮವು ಅ. 17″ ರಂದು ಎಕ್ಕೂರು ಪಿಷರಿಶ್ ಕಾಲೇಜುನಲ್ಲಿ ನಡೆಯಿತು. ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಿ ಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿಗಳಿಗೆ 12 ನೇ ಕಂತಿನ ಹಣವನ್ನು ಬಿಡುಗಡೆ ಮಾಡುವ ಮೂಲಕ ದೇಶದ ರೈತರಿಗೆ ದೀಪಾವಳಿ ಉಡುಗೊರೆ ನೀಡಿದ ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿ ಯವರ ಸಂವಾದ ಕಾರ್ಯಕ್ರಮದಲ್ಲಿ ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರವರು ಸಭೆಯನ್ನುದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಭಾ ವೇದಿಕೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್ ಮಂಗಳೂರು ಮಹಾನಗರ ಪಾಲಿಕೆಯ ಉಪಮಹಾಪೌರರಾದ ಪೂರ್ಣಿಮಾ, ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಭರತ್ ಸೂಟರ್ ಪೇಟೆ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಸಂವಾದ ಕಾರ್ಯಕ್ರಮ ವೀಕ್ಷಣೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದಿರೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ
ಸತೀಶ್ ಕುಂಪಲ, ಜಿಲ್ಲಾ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ರೈ ಬೋಳಿಯಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಕಸ್ತೂರಿ ಪಂಜ, ಈಶ್ವರ್ ಕಟೀಲ್, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮಾಜಿ ಕಾರ್ಪೊರೇಟರ್ ಭಾಸ್ಕರ ಚಂದ್ರ ಶೆಟ್ಟಿ, ಸಿಬ್ಬಂದಿ ವರ್ಗ, ಫಲಾನುಭವಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

