Monday, July 22, 2024
spot_img
More

    Latest Posts

    ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ

    ಒಡಿಶಾ: ಬಾಲಾಸೋರ್ ರೈಲು ಅಪಘಾತದಲ್ಲಿ ಪತಿಯ ಸತ್ತಿದ್ದಾನೆಂದು ಸುಳ್ಳು ಹೇಳಿ ರಾಜ್ಯ ಸರ್ಕಾರ ಮತ್ತು ರೈಲ್ವೆ ಇಲಾಖೆ ಘೋಷಿಸಿದ ಪರಿಹಾರದ ಹಣ ಪಡೆಯಲು ಯತ್ನಿಸಿ ಮಹಿಳೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

    ಕಟಕ್ ಜಿಲ್ಲೆಯ ಮಣಿಬಂಡಾದ ಗೀತಾಂಜಲಿ ದತ್ತಾ ಜೂನ್ 2 ರಂದು ನಡೆದ ಅಪಘಾತದಲ್ಲಿ ತನ್ನ ಪತಿ ಬಿಜಯ್ ದತ್ತಾ ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದ್ದರು ಮತ್ತು ಯಾರದೋ ಮೃತದೇಹವನ್ನು ತನ್ನ ಗಂಡನದೇ ಎಂದು ಹೇಳಿ ನಾಟಕ ಮಾಡಿದ್ದಳು. ಆದರೆ, ದಾಖಲೆಗಳ ಪರಿಶೀಲನೆಯ ನಂತರ ಆಕೆಯ ಡ್ರಾಮ ಮಾಡಿರುವುದು ಬಯಲಾಗಿದೆ.

    ಪೊಲೀಸರು ಎಚ್ಚರಿಕೆ ನೀಡಿ ಆಕೆಯನ್ನು ಕಳುಹಿಸಿದ್ದಾರೆ.ಆದರೆ ಪತಿ ಮಣಿಯಬಂಧ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪತ್ನಿಯ ವಿರುದ್ಧ ದೂರು ದಾಖಲಿಸಿದ್ದಾರೆ.ನನ್ನನ್ನು ಸತ್ತಿದ್ದಾರೆಂದು ಸುಳ್ಳು ಹೇಳಿದ್ದಾರೆಂದು ದೂರಿನಲ್ಲಿ ಆರೋಪಿಸಿದ್ದಾರೆ.

    ಬಂಧನದ ಭೀತಿಯಿಂದ ಮಹಿಳೆ ಈಗ ತಲೆಮರೆಸಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.ಕಳೆದ 13 ವರ್ಷಗಳಿಂದ ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕರ ಹಣವನ್ನು ದೋಚಲು ಯತ್ನಿಸಿದ ಗೀತಾಂಜಲಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜಯ್ ಒತ್ತಾಯಿಸಿದ್ದಾರೆ

    ಒಡಿಶಾ ರೈಲು ದುರಂತದಲ್ಲಿ ಮಡಿದವರಿಗೆ ರೈಲ್ವೇ ಇಲಾಖೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಕಾರ್ಯಾಲಯ 2 ಲಕ್ಷ ರೂಪಾಯಿ ಘೋಷಿಸಿದರೆ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಒಟ್ಟು ರೈಲು ದುರಂತದಲ್ಲಿ ಮೃತರ ಕುಟಂಬಕ್ಕೆ 17 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ. ಈ ಮೊತ್ತ ನೋಡಿದ ಒಡಿಶಾದ ಕಟಕ್ ಜಿಲ್ಲೆಯ ಗೀತಾಂಜಲಿ ದತ್ತ ಒಡಿಶಾ ರೈಲು ದುರಂತವನ್ನೇ ಬಳಸಿಕೊಂಡು ಸರ್ಕಾರದ ಪರಿಹಾರ ಮೊತ್ತವನ್ನು ಸುಳ್ಳು ಹೇಳಿ ಪಡೆಯಲು ಯತ್ನಿಸಿದ್ದಾರೆ‌.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss