ಮಂಗಳೂರು: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಅ.6ರಂದು ದುಬೈನಿಂದ ಏರ್‌ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಮಂಗಳೂರಿಗೆ ಬರುತ್ತಿದ್ದ ಪ್ರಯಾಣಿಕನೋರ್ವ ಅಂದಾಜು 20 ಲಕ್ಷ ರೂ. ಮೌಲ್ಯದ 24 ಕ್ಯಾರೆಟ್‌ನ 347 ಗ್ರಾಂ ಚಿನ್ನವನ್ನು ಬಿಳಿ ಪೌಡರ್ ರೂಪಕ್ಕೆ ಪರಿವರ್ತಿಸಿ 5 ಪ್ಯಾಕೆಟ್‌ಗಳಲ್ಲಿ ತುಂಬಿಸಿ “ಕಿಚನ್ ಟ್ರೆಸರ್’ ಮತ್ತು ‘ಕೀ ಮಿಕ್ಸ್’ ಎಂಬ ಲೇಬಲ್ ಹಾಕಿ ಸಾಗಾಟ ಮಾಡುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
©2021 Tulunada Surya | Developed by CuriousLabs