ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಗುದದ್ವಾರದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಘಟನೆ ನಡೆದಿದೆ. ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಒಟ್ಟು 20.41 ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಅಕ್ಟೋಬರ್ 4 ರಂದು ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮಹಿಳೆಯ ತಪಾಸಣೆ ವೇಳೆ ಡಿಟೆಕ್ಟರ್ ನಲ್ಲಿ ಬೀಪ್ ಶಬ್ದ ಬಂದಿದ್ದು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಧೃಡಪಟ್ಟಿದೆ.
ಎರಡು ಗೋಳಾಕಾರದ ಕ್ಯಾಪ್ಸುಲ್ ಮಾದರಿಗಳಲ್ಲಿ ಪೇಸ್ಟ್ ರೂಪದ ಚಿನ್ನವನ್ನು ಗುದದ್ವಾರದಲ್ಲಿ ಬಚ್ಚಿಟ್ಟುಕೊಂಡು ಸಾಗಣೆ ಮಾಡುತ್ತಿದ್ದು, 24 ಕ್ಯಾರೆಟ್‌ನ 345 ಗ್ರಾಂ ಚಿನ್ನ ಪತ್ತೆಯಾಗಿದ್ದು, ಇದರ ಮೌಲ್ಯ 20,41,650 ರೂ. ಎಂದು ಅಂದಾಜಿಸಲಾಗಿದೆ.