ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಆಸ್ಪತ್ರೆಗೆ 1. 66 ಕೋಟಿ ರೂಪಾಯಿ ವೆಚ್ಚದಲ್ಲಿ 25 ಐಸಿಯು ಬೆಡ್ಗಳು ಮಂಜೂರಾಗಿ ಅನುಷ್ಠಾನ ಹಂತದಲ್ಲಿದೆ. ಇದರ ಜೊತೆಗೆ ರಾಜ್ಯದ 41 ತಾಲೂಕು ಆಸ್ಪತ್ರೆಗೆ ಮಂಜೂರಾದ ಟೆಲಿ ಐಸಿಯು ವ್ಯವಸ್ಥೆ ಬಂಟ್ವಾಳದಲ್ಲೂ ಶೀಘ್ರದಲ್ಲೇ ಕಾರ್ಯಾರಂಭಗೊಳ್ಳಲಿದೆ ಎಂದು ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಹೇಳಿದ್ದಾರೆ.
ಅವರು ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ 25 ಐಸಿಯು ಬೆಡ್ಗಳ ಅನುಷ್ಠಾನ ಕಾಮಗಾರಿ ಪರಿಶೀಲಿಸಿ ಮಾತನಾಡಿದ ಅವರು ಈ ಮೊದಲು ಬಂಟ್ವಾಳದಲ್ಲಿ 3 ಐಸಿಯು ಬೆಡ್ಗಳು ಮಾತ್ರ ಇತ್ತು. ಇನ್ನು ಮುಂದಕ್ಕೆ ಆಸ್ಪತ್ರೆಯಲ್ಲಿ 25 ಐಸಿಯು ಬೆಡ್ಗಳ ಲಭ್ಯತೆ ಇರಲಿದ್ದು, ಇದು ಸಾರ್ವಜನಿಕರಿಗೆ ಅತ್ಯಂತ ಹೆಚ್ಚು ಪ್ರಯೋಜನಕಾರಿಯಾಗಲಿದೆ ಎಂದರು. ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವ ಉದ್ದೇಶದಿಂದ ಆಸ್ಪತ್ರೆಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ನೀಡಲಾಗುತ್ತಿದ್ದು, ಅಮೃತ್ ಆರೋಗ್ಯ ಯೋಜನೆಯಡಿ ಬಂಟ್ವಾಳ ತಾಲೂಕಿನ ಬೆಂಜನಪದವು, ರಾಯಿ, ನಾವೂರು ದೈವಸ್ಥಳ ಹಾಗೂ ಪುಣಚ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತಲಾ 20 ಲಕ್ಷ ರೂಪಾಯಿಯಂತೆÉ ಒಟ್ಟು 1 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದರು.
©2021 Tulunada Surya | Developed by CuriousLabs