ಮುಲ್ಕಿ: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯು ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ. ಎ.03ರಂದು ಕಾಣೆಯಾಗಿದ್ದ ಪಕ್ಷಿಕೆರೆ ಅತ್ತೂರು ಕಾಪಿಕಾಡಿನ ಯುವತಿ ಸ್ವಾತಿ ಕೋಟ್ಯಾನ್,ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದು ಮಾನಸಿಕ ಖಿನ್ನತೆಯಿಂದ ಮನೆ ಬಿಟ್ಟು ತೆರಳಲು ಕಾರಣವಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮುಲ್ಕಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಧರ್ಮಸ್ಥಳದಲ್ಲಿ ಯುವತಿ ಇರುವ ಬಗ್ಗೆ ಅಲ್ಲಿನ ಪೊಲೀಸರಿಂದ ಮಾಹಿತಿ ಸಿಕ್ಕ ಕೂಡಲೇ ಧರ್ಮಸ್ಥಳ ಪೊಲೀಸರನ್ನು ಸಂಪರ್ಕಿಸಿ ಯುವತಿಯನ್ನು ಕರೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
©2021 Tulunada Surya | Developed by CuriousLabs