ಕಾಪು, ಮೇ 24: ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಉಚಿತ ಸಮಗ್ರ ಆರೋಗ್ಯ ತಪಾಸಣಾ ಶಿಬಿರವು ಮೇ 26, 2026 ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಚಂದ್ರನಗರದ ಬಟರ್ ಫ್ಲೈ ಪಾರ್ಟಿ ಹಾಲ್ನಲ್ಲಿ ನಡೆಯಲಿದೆ.
ಶಿಬಿರದಲ್ಲಿ ಉಚಿತ ನೇತ್ರ ತಪಾಸಣೆ, ಮಧುಮೇಹ ಪರೀಕ್ಷೆ, ರಕ್ತದೊತ್ತಡ ತಪಾಸಣೆ ಹಾಗೂ ದಂತ ತಪಾಸಣೆ ಸೇವೆಗಳು ಲಭ್ಯವಿರಲಿವೆ.
ಈ ಆರೋಗ್ಯ ಶಿಬಿರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವಿಕೆ ಘಟಕ ಉಡುಪಿ, ಸಮುದಾಯ ಆರೋಗ್ಯ ಕೇಂದ್ರ ಶಿರ್ವ, ಬಟರ್ ಫ್ಲೈ ಗೆಸ್ಟ್ ಹೌಸ್ & ಪಾರ್ಟಿ ಹಾಲ್ ಚಂದ್ರನಗರ, ಗ್ರಾಮ ಪಂಚಾಯತ್ ಕುತ್ಯಾರು/ಕಳತ್ತೂರು, ಅಲಯನ್ಸ್ ಕ್ಲಬ್ ಉಡುಪಿ ರಾಯಲ್ ಹಾಗೂ ರೋಟರಿ ಕ್ಲಬ್ ಶಿರ್ವ ಇವರ ಸಹಯೋಗದಲ್ಲಿ ಆಯೋಜಿಸಲಾಗಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉಚಿತ ಆರೋಗ್ಯ ಸೇವೆಯ ಪ್ರಯೋಜನ ಪಡೆದುಕೊಳ್ಳುವಂತೆ ಸಮುದಾಯ ಆರೋಗ್ಯ ಕೇಂದ್ರ ಶಿರ್ವದ ಆಡಳಿತ ವೈದ್ಯಾಧಿಕಾರಿ ಹಾಗೂ ಬಟರ್ ಫ್ಲೈ ಗೆಸ್ಟ್ ಹೌಸ್ & ಪಾರ್ಟಿ ಹಾಲ್ ಮಾಲಕರಾದ ಡಾ. ಫಾರೂಕ್ ಚಂದ್ರನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





