ಉಡುಪಿ : ವಂಚನೆ ಪ್ರಕರಣದಲ್ಲಿ ಸುದ್ದಿಯಲ್ಲಿರುವ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದೆ.ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಟಿಕೆಟ್ ಕೊಡಿಸುವ ನೆಪದಲ್ಲಿ ವಂಚನೆ ಎಸಗಿದ ಆರೋಪದಡಿ ಈಗಾಗಲೇ ಸಿಸಿಬಿ ಪೊಲೀಸರು ಚೈತ್ರಾ ಅವರನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.ಬಂಧನಕ್ಕೊಳಗಾಗಿ ಸಿಸಿಬಿ ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಆರೋಪ ಕೇಳಿಬಂದಿದೆ.ಬಟ್ಟೆ ಅಂಗಡಿ ಇಟ್ಟು ಕೊಡುವುದಾಗಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ ಆರೋಪ ಸಂಬಂಧ ಉಡುಪಿಯಲ್ಲಿ ಎಫ್ಐಆರ್ ದಾಖಲಾಗಿದೆ.ಬಟ್ಟೆ ಅಂಗಡಿ ಇಟ್ಟು ಕೊಡುವುದಾಗಿ 5 ಲಕ್ಷ ರೂ. ಪಡೆದು ವಂಚನೆ ಎಸಗಿದ್ದಾಗಿ ಆರೋಪಿಸಿ ಬಿಜೆಪಿ ಕಾರ್ಯಕರ್ತ ಸುಧೀನ್ ಎಂಬುವರು ಬ್ರಹ್ಮಾವರ ವೃತ್ತ ವ್ಯಾಪ್ತಿಯ ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
©2021 Tulunada Surya | Developed by CuriousLabs