Thursday, March 28, 2024
spot_img
More

    Latest Posts

    ರಾಜ್ಯದ ಹಲವೆಡೆ ಇನ್ನೂ 4 ದಿನ ಮಳೆ ಸಾಧ್ಯತೆ..!

    ಬೆಂಗಳೂರು: ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯವು ಸಾಧ್ಯತೆ ಇದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮೈಸೂರು ಮತ್ತು ಮಂಡ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

    ಕರಾವಳಿ ಜಿಲ್ಲೆಗಳಲ್ಲಿ ಮೇ. 11 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ,ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss