Friday, April 19, 2024
spot_img
More

    Latest Posts

    ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆ

    ಬೆಂಗಳೂರು : ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.

    ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಏಪ್ರಿಲ್ 11 ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ದಾವಣಗೆರೆ, ಬೆಂಗಳೂರು, ಮೈಸೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಏಪ್ರಿಲ್ 10ರವರೆಗೂ ಮಳೆಯಾಗಲಿದೆ. ಇಂದು ಬೆಂಗಳೂರು, ಚಾಮರಾಜನಗರ, ಮೈಸೂರು, ಹಾಸನ, ಮಂಡ್ಯ, ರಾಮನಗರ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss