Saturday, July 27, 2024
spot_img
More

    Latest Posts

    ಪ್ರವಾಸ ಬಸ್ ಪಲ್ಟಿ: 45 ಮಕ್ಕಳಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

    ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ನಾಲ್ಕು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. 45 ಮಕ್ಕಳು ಪ್ರಾಣಾಪಯದಿಂದ ಪಾರಾಗಿದ್ದಾರೆ.

    ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ ಬಸ್ ಪಲ್ಟಿಯಾಗಿದ್ದು ಅದರಲ್ಲಿ ಇದ್ದ 45 ಮಕ್ಕಳು‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಸಣ್ಣಪುಟ್ಟ ಗಾಯಗೊಂಡ ಮಕ್ಕಳಿಗೆ ಸವಣೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಸರ್ಕಾರಿ ಬಸ್ ನಲ್ಲಿ ಮಕ್ಕಳು ಪ್ರವಾಸ ಹೋಗುತ್ತಿದ್ದರು.

    ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಸಜ್ಜನಗುಡ್ಡದ ಸರ್ಕಾರಿ ಶಾಲೆ ಮಕ್ಕಳು ಪ್ರವಾಸ ಹಿನ್ನೆಲೆಯಲ್ಲಿ ರಾಕಗಾರ್ಡ್​ನ್​ಗೆ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ.ಘಟನೆಯ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss