Friday, March 29, 2024
spot_img
More

    Latest Posts

    ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ; 5 ವರ್ಷ ಜೈಲು ಶಿಕ್ಷೆ

    ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ ರಂಜಿತ್‌ ಕುಮಾರ್‌ನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್‌.ಸಿ-1 ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಮತ್ತು 8,000 ರೂ. ದಂಡ ವಿಧಿಸಿದೆ.

    ರಂಜಿತ್‌ ಕುಮಾರ್‌ ಮೂಡುಬಿದಿರೆ ತಾಲೂಕಿನಲ್ಲಿ ಬಾಡಿಗೆ ಮನೆಯಲ್ಲಿದ್ದ. ಈತ ನೊಂದ ಬಾಲಕಿಯ ತಾಯಿಯ ಎರಡನೇ ಪತಿಯಾಗಿದ್ದು, 2019ರ ಮೇ 8ರಂದು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದ ಮೂಡುಬಿದಿರೆ ಪೊಲೀಸ್‌ ಠಾಣೆ ಉಪನಿರೀಕ್ಷಕಿ ಸಾವಿತ್ರಿ ನಾಯಕ್‌ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಆ. 25ರಂದು ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ತೀರ್ಪು ಪ್ರಕಟಿಸಿದ್ದಾರೆ.

    ರಂಜಿತ್‌ ಕುಮಾರ್‌ಗೆ ಪೋಕ್ಸೊ ಕಾಯ್ದೆಯಡಿ 5 ವರ್ಷ ಜೈಲು ಶಿಕ್ಷೆ ಮತ್ತು 5,000 ರೂ. ದಂಡ, ಐಪಿಸಿ ಕಲಂ 354ರ ಆರೋಪಕ್ಕೆ ಸಂಬಂಧಿಸಿ ಒಂದು ವರ್ಷ ಜೈಲು ಶಿಕ್ಷೆ ಮತ್ತು 1,000 ರೂ. ದಂಡ, ಕಲಂ-504ರ ಆರೋಪಕ್ಕೆ ಸಂಬಂಧಿಸಿ 6 ತಿಂಗಳ ಜೈಲು ಶಿಕ್ಷೆ ಮತ್ತು 1,000 ದಂಡ, ಕಲಂ 506ರ ಆರೋಪಕ್ಕೆ ಸಂಬಂಧಿಸಿ 6 ತಿಂಗಳ ಜೈಲು ಶಿಕ್ಷೆ ಮತ್ತು 1,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೆ, ನೊಂದ ಬಾಲಕಿಗೆ ಪರಿಹಾರ ನೀಡುವಂತೆಯೂ ಆದೇಶದಲ್ಲಿ ತಿಳಿಸಿದ್ದಾರೆ. ಪ್ರಾಸಿಕ್ಯೂಶನ್‌ ಪರ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದಿಸಿದ್ದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss