ಬೆಂಗಳೂರು: ಕರ್ತವ್ಯದ ವೇಳೆ ಮೃತಪಟ್ಟ ಪೊಲೀಸರಿಗೆ 50 ಲಕ್ಷ ರೂ. ಪರಿಹಾರ ಕೊಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶನಿವಾರ ಮೈಸೂರು ರಸ್ತೆಯ ಸಿಎಆರ್ ಮೈದಾನದಲ್ಲಿ ನಡೆದ ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಐದು ಸಂಚಾರಿ ಮತ್ತು ಆರು ಮಹಿಳಾ ಪೊಲೀಸ್ ಠಾಣೆ ಸ್ಥಾಪಿಸಲಾಗುತ್ತದೆ. 2400 ಪೊಲೀಸ್ ಪೇದೆಗಳನ್ನು ನೇಮಕ ಮಾಡಲಾಗುತ್ತದೆ. ಗೃಹ 2025 ಯೋಜನೆ ಅಡಿಯಲ್ಲಿ 2, 225 ಪೊಲೀಸ್ ವಸತಿಗಾಗಿ 450ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಅಧಿಕಾರಿ ಕಚೇರಿ, ನಿರ್ವಹಣೆಗೆ ಕೂಡ ಹಣ ಬಿಡುಗಡೆ ಮಾಡಲಾಗಿದೆ. ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಕುಟುಂಬಸ್ಥರಿಗಾಗಿ ಆರೋಗ್ಯ ಭಾಗ್ಯ ಯೋಜನೆ ಅಡಿ ನೂರು ಕೋಟಿ ಕೊಡಲಾಗಿದೆ. ನಿವೃತ್ತಿ ಅಧಿಕಾರಿ ಮತ್ತು ಸಿಬ್ಬಂದಿ ಅವರ ಅವಲಂಬಿತ ಪತಿ, ಪತ್ನಿಯರ ಚಿಕಿತ್ಸೆಗಾಗಿ 25 ಕೋಟಿ ರೂ. ರಿಲೀಸ್ ಮಾಡಲಾಗಿದೆ ಎಂದರು.