Saturday, July 27, 2024
spot_img
More

    Latest Posts

    ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಬೈಕ್ ಖರೀದಿಗೆ 50 ಸಾವಿರ ಸಹಾಯಧನ

    ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದ ಯುವಕ ಯುವತಿಯರಿಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಬೈಕ್ ಖರೀದಿಗೆ ಸರ್ಕಾರದಿಂದ 50 ಸಾವಿರ ಸಹಾಯ ಧನ ನೀಡಲಿದೆ ಎಂದು ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ದ್ವಿಚಕ್ರ ವಾಹನಗಳನ್ನು ನೀಡುವ ಗುರಿ ಹೊಂದಲಾಗಿದೆ ಎಂದರು. ಪ್ರತಿ ದ್ವಿಚಕ್ರ ವಾಹನಕ್ಕೆ 70 ಸಾವಿರ ರೂ ನಿಗದಿ ಮಾಡಲಾಗಿದ್ದು, 50 ಸಾವಿರ ಸಬ್ಸಿಡಿ ಹಾಗೂ 20 ಸಾವಿರ ರೂ ಬ್ಯಾಂಕ್ ಸಾಲ ಸೌಲಭ್ಯ ಇರಲಿದೆ ಎಂದು ಹೇಳಿದರು.ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕು ದ್ವಿಚಕ್ರ ವಾಹನಗಳನ್ನು ನೀಡಲಾಗುತ್ತಿದೆ ಎಂದರು.

    ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಮಾಸಿಕ ಭೋಜನ ವೆಚ್ಚವನ್ನು ಹೆಚ್ಚಳ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 1600 ರೂ. ರಿಂದ 1750 ರೂಪಾಯಿಗೆ ಏರಿಕೆ ಮಾಡಲಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ 1500 ರಿಂದ 1650 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ. ಮೆಟ್ರಿಕ್ ಪೂರ್ವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ಶೇ.60 ಕೇಂದ್ರ ಸರ್ಕಾರದಿಂದ 40 ಪ್ರತಿಶತ ರಾಜ್ಯ ಸರ್ಕಾರದಿಂದ ವೆಚ್ಚ ಭರಿಸಲಾಗುತ್ತಿದೆ. 1ನೇ ತರಗತಿಯಿಂದ 8ನೇ ತರಗತಿಗೆ ರಾಜ್ಯ ಸರ್ಕಾರದಿಂದ 100% ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ವಿದ್ಯಾರ್ಥಿ ವೇತನವನ್ನು ಡಿಬಿಟಿ ಮೂಲಕ ಪಾವತಿಸಲಾಗುತ್ತಿದೆ ಎಂದು ತಿಳಿಸಿದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss