Monday, July 15, 2024
spot_img
More

  Latest Posts

  ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಕಾಮುಕನಿಗೆ 6 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

  ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಎಫ್‌ಟಿಎಸ್‌ಸಿ-1) ಕಾಮುಕನಿಗೆ 6 ವರ್ಷಗಳ ಕಠಿಣ ಸಜೆ ವಿಧಿಸಿ ಆದೇಶಿಸಿದ್ದಾರೆ. ವಿಜಯ್ ಪ್ರವೀಣ್ ಕುಟಿನ್ಹಾ(29) ಶಿಕ್ಷೆಗೊಳಗಾದ ಕಾಮುಕ. 2022ರ ಎ.20ರಂದು ಸಂಜೆ 4ಕ್ಕೆ ಅಪ್ರಾಪ್ತೆಗೆ ಬಾಲಕಿ ಅಂಗಡಿಯೊಂದಕ್ಕೆ ತೆರಳಿದ್ದಳು. ಈ ವೇಳೆ ಅದೇ ಅಂಗಡಿಗೆ ಬಂದಿದ್ದ ಆರೋಪಿ ಬಾಲಕಿಗೆ ಲೈಂಗಿಕ ಕಿರುಕುಳವನ್ನು ನೀಡಿದ್ದ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್‌ಪೆಕ್ಟ‌ರ್ ಶರಣಪ್ಪ ಭಂಡಾರಿ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಎಫ್‌ಟಿಎಸ್‌ಸಿ-1) ಪ್ರಕರಣವನ್ನು ಕೈಗೆತ್ತಿಕೊಂಡು ವಿಚಾರಣೆ ನಡೆಸಿದೆ. ವಾದವಿವಾದವನ್ನು ಆಲಿಸಿದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅಪರಾಧಿಗೆ ಪೊಕ್ಸೊ ಕಾಯ್ದೆಯನ್ವಯ 6 ವರ್ಷಗಳ ಕಠಿಣ ಸಜೆ ಹಾಗೂ 20ಸಾವಿರ ರೂ. ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿ 6 ತಿಂಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. ಸಂತ್ರಸ್ತೆಗೆ ಸರ್ಕಾರ 1 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶದಲ್ಲಿ ನ್ಯಾಯಾಧೀಶೆ ತಿಳಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಪೊಕ್ಸೊ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾ ದೇವಿ ವಾದಿಸಿದ್ದರು.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss