Friday, April 19, 2024
spot_img
More

    Latest Posts

    ಕಂದಕಕ್ಕೆ ಉರುಳಿದ ವಾಹನ : ಶಬರಿಮಲೆಗೆ ತೆರಳುತ್ತಿದ್ದ 8 ಜನ ಅಯ್ಯಪ್ಪ ಭಕ್ತರ ಸಾವು.!

    ಇಡುಕ್ಕಿ: ಶಬರಿಮಲೆ ಯಾತ್ರೆ ಈಗಾಗಲೇ ಆರಂಭವಾಗಿದ್ದು, ಭಾರೀ ಸಂಖ್ಯೆಯಲ್ಲಿ ಭಕ್ತರು ಅಯ್ಯಪ್ಪನ ದರ್ಶನ ಪಡೆಯಲು ಯಾತ್ರೆ ಕೈಗೊಳ್ಳುತ್ತಿದ್ದಾರೆ. ಆದರೀಗ ಇರುಮುಡಿ ಕಟ್ಟಿ ಶಬರಿಮಲೆ ಯಾತ್ರೆಗೆ ತೆರಳುತ್ತಿದ್ದ ವೇಳೆ ವಾಹನವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ತಮಿಳುನಾಡಿನ ಎಂಟು ಮಂದಿ ಭಕ್ತರು ಸಾವನ್ನಪ್ಪಿರುವ ಘಟನೆ ಇಡುಕ್ಕಿಯಲ್ಲಿ ನಡೆದಿದೆ.

    ಶಬರಿಮಲೆಗೆ ಹೋಗುವ ಕುಮಿಲಿ- ಕಂಬಂ ಎಂಬಲ್ಲಿ ಈ ಅಪಘಾತ ಸಂಭವಿಸಿದೆ.

    ಭಕ್ತರಿದ್ದ ವಾಹನ ರಾತ್ರಿ ವೇಳೆ ಹೋಗುತ್ತಿದ್ದಾಗ ಆಕಸ್ಮಿಕವಾಗಿ ರಸ್ತೆಯ ಪಕ್ಕದ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ವರದಿಯಾಗಿದೆ. ಇನ್ನೂ 8 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.

    ವಿಷಯ ತಿಳಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಸ್ತೆಯ ತಿರುವನ್ನು ಗಮನಿಸದ ಚಾಲಕನಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss