Thursday, October 10, 2024
spot_img
More

    Latest Posts

    ಬಂಟ್ವಾಳ: ಗಾಂಜಾ ಮಾರಾಟ ಪ್ರಕರಣ- 9 ವರ್ಷ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    ಬಂಟ್ವಾಳ: ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 9 ವರ್ಷ ಹಿಂದಿನ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರೆ‌.

    ಮಂಗಳೂರು ಮಂಜನಾಡಿ ಗ್ರಾಮದ ನಾಟೆಕಲ್ ನಿವಾಸಿ ಅಶ್ರಫ್ ಬಂಧಿತ ಆರೋಪಿ. 2015 ರಲ್ಲಿ ಗಾಂಜಾ ಮಾರಾಟ‌ ಮಾಡಿದ್ದ ಆರೋಪದ ಮೇಲೆ ಬಂಧನವಾಗಿ , ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿ ಅಶ್ರಫ್ ಅ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದೀಗ ಖಚಿತ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಪೋಲಿಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರ ನೇತ್ರತ್ವದ ಎಸ್.ಐ.ಹರೀಶ್, ಮತ್ತು ಮೂರ್ತಿ ಎಂ.ಅರ್.ಅವರ ಮಾರ್ಗದರ್ಶನ ದಲ್ಲಿ ಸಿಬ್ಬಂದಿಗಳಾದ ಗಣೇಶ್ ಪ್ರಸಾದ್, ಯೋಗೇಶ್, ವಿಜಯಕುಮಾರ್ ಅವರು ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
    ಬಳಿಕ ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರೆ‌.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss