Thursday, September 19, 2024
spot_img
More

    Latest Posts

    ಹನಿಟ್ರ್ಯಾಪ್ ಕೇಸ್ : ಯುವತಿಯೋರ್ವಳನ್ನು ಬಂಧಿಸಿದ ಪೊಲೀಸರು : 6 ಮಂದಿ ಎಸ್ಕೇಪ್

    ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರ, ವೃತ್ತಿಯಲ್ಲಿ ಸೇಲ್ಸ್ ಮ್ಯಾನ್ ಆಗಿರುವ ಅಬ್ದುಲ್ ನಾಸೀರ್ (25)ಎಂಬವರು ಹನಿಟ್ರ್ಯಾಪ್ ಗೆ ಬಲಿಯಾಗಿ ರೂ.30 ಲಕ್ಷ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದವರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೋರ್ವ 7 ಮಂದಿ ವಿರುದ್ಧ ನೀಡಿದ್ದ ದೂರಿನನ್ವಯ ಈಗ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿದ್ದಾರೆ.

    ಘಟನೆ ಎ.12ಕ್ಕೆ ನಡೆದಿದ್ದು ಇದೀಗ ಪೊಲೀಸ್ ಮೇಲಾಧಿಕಾರಿಗಳ ಸೂಚನೆಯಂತೆ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ನೆಟ್ಟಣಿಗೆ ಮುಡ್ನೂರು ಚೀಚಗದ್ದೆಯ ಹನೀಫ್ ಯಾನೆ ಕೆಎಂವೈ ಹನೀಫ್, ಕೊಟ್ಯಾಡಿಯ ಮಹಮ್ಮದ್ ಕುಂಞಿ, ಕೊಟ್ಯಾಡಿಯ ಶಾಫಿ, ಸವಣೂರಿನ ಅಝರ್, ಸಯೀದ್ ಮೋನು, ನಾಸಿರ್ ಮತ್ತು ಕಾರ್ಕಳದವಳೆಂದು ಪರಿಚಯಿಸಿಕೊಂಡಿದ್ದ ತನೀಶಾ ಎಂಬವರ ವಿರುದ್ಧ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

    ತನಿಖೆ ಕೈಗೆತ್ತಿಗೊಂಡ ಉಪವಿಭಾಗದ ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್ ನೇತೃತ್ವದ ಪೊಲೀಸರು ಪ್ರಕರಣದ ಆರೋಪಿಗಳ ಪೈಕಿ ತನೀಶಾ ಎಂಬವರನ್ನು ಬಂಧಿಸಿದ್ದಾರೆ. ಉಳಿದ ಆರು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss