Tuesday, April 30, 2024
spot_img
More

    Latest Posts

    ಮಂಗಳೂರು: ಡಿವೈಡರ್ ದಾಟಿ‌ ಕಂಟೈನರ್ ಗೆ ಕಾರು ಢಿಕ್ಕಿ – ಓರ್ವ ಮೃತ್ಯು

    ಮಂಗಳೂರು: ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಕಾರು ಚಾಲಕ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಅಡ್ಯಾರ್ ಕಣ್ಣೂರು ಬಳಿ ನಡೆದಿದೆ.

    ಮೃತರನ್ನು ಮಂಜೇಶ್ವರ ಸಮೀಪದ ಕುಂಜತ್ತೂರು ನಿವಾಸಿ ಇಬ್ರಾಹೀಂ(32) ಎಂದು ಗುರುತಿಸಲಾಗಿದೆ.ಕುಂಜತ್ತೂರಿನಿಂದ ಬಂಟ್ವಾಳ ರಸ್ತೆಯಾಗಿ ಈ ಮೂವರು ಕಾರಿನಲ್ಲಿ ತೆರಳುತ್ತಿದ್ದು, ಈ ವೇಳೆ ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಕಾರು ಡಿವೈಡರ್ ದಾಟಿ‌ದಾಗ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಂಟೈನರ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.ಈ ಬಗ್ಗೆ ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss