ಮಂಗಳೂರು: ನಗರದ ಉರ್ವಸ್ಟೋರ್ ನಲ್ಲಿ ನೆಲೆಸಿದ್ದ ಉತ್ತರ ಪ್ರದೇಶ ಮೂಲದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪತಿಯ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಉತ್ತರಪ್ರದೇಶ ಮೂಲದ ನಿವಾಸಿ, ಪ್ರಸ್ತುತ ನಗರದ ಉರ್ವಸ್ಟೋರ್ ವಾಸಿ ರಾಕೇಶ್ ಹೂಜಾ (29) ಎಂಬಾತನ ಪತ್ನಿ ಪ್ರೀತಿ (26) ಮೃತ ಮಹಿಳೆ. ಒಂದೂವರೆ ವರ್ಷದ ಹಿಂದೆ ರಾಕೇಶ್ ಹೂಜಾ ಹಾಗೂ ಪ್ರೀತಿ ಮದುವೆಯಾಗಿದ್ದರು. ರಾಕೇಶ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕ್ಯಾಬಿನ್ ಕ್ರೂ ಆಗಿ ಕೆಲಸ ನಿರ್ವಹಿಸುತ್ತಿದ್ದು, ಮಂಗಳೂರಿನ ಉರ್ವಾಸ್ಟೋರ್ ನಲ್ಲಿ ದಂಪತಿ ವಾಸ್ತವ್ಯವಿದ್ದರು. ಈತ ಪತ್ನಿಗೆ ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಎಂಬ ದೂರು ಕೇಳಿಬಂದಿದೆ. ಈ ಬಗ್ಗೆ ಪ್ರೀತಿ ಕುಟುಂಬಸ್ಥರು ಉರ್ವಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.