ಬೆಂಗಳೂರು:ಸರ್ಕಾರಿ ಆಸ್ಪತ್ರೆಯಲ್ಲೇ ವೈದ್ಯರೊಬ್ಬರು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ತಿಲಕ್ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಡಾ.ಎಸ್.ರೇಣುಕಾನಂದ (43) ಆತ್ಮಹತ್ಯೆ ಮಾಡಿಕೊಂಡ ವೈದ್ಯರು.
ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದ ರೇಣುಕಾನಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಾಗಿದೆ. ಇದರಿಂದ ಬೇಸತ್ತು ಅವರು ಆಸ್ಪತ್ರೆಯ ಡ್ಯೂಟಿ ರೂಮ್ನಲ್ಲೇ ತಾಯಿಯ ಸೀರೆಯಿಂದ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವೈದ್ಯರು ನೇಣಿಗೆ ಶರಣಾಗಿರುವ ಬಗ್ಗೆ ಆಸ್ಪತ್ರೆ ಸಿಬ್ಬಂದಿ ತಿಲಕ್ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರಿನ ಅನ್ವಯ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸದ್ಯ ಮರಣೋತ್ತರ ಪರೀಕ್ಷೆಗಾಗಿ ರೇಣುಕಾನಂದ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಬಳಿಕ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ.